ಗೋಕರ್ಣ ದೇವಾಲಯ ನಿರ್ವಹಣೆ ಮಾಜಿ ನ್ಯಾಯಮೂರ್ತಿ ನೇತೃತ್ವದ ಸಮಿತಿಗೆ ಹಸ್ತಾಂತರ: ಸುಪ್ರೀಂ ಕೋರ್ಟ್‌ ತೀರ್ಪು

ಕರ್ನಾಟಕದ ಗೋಕರ್ಣದಲ್ಲಿರುವ ಮಹಾಬಲೇಶ್ವರ ದೇವಸ್ಥಾನದ ನಿರ್ವಹಣೆಯನ್ನು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ ಎನ್ ಶ್ರೀಕೃಷ್ಣ ನೇತೃತ್ವದ ಮೇಲ್ವಿಚಾರಣಾ ಸಮಿತಿಗೆ ಹಸ್ತಾಂತರಿಸಲಾಗುವುದು ಎಂದು ಸುಪ್ರೀಂಕೋರ್ಟ್ ಸೋಮವಾರ ತಿಳಿಸಿದೆ.

ಗೋಕರ್ಣದಲ್ಲಿರುವ ಮಹಾಬಲೇಶ್ವರ ದೇವಾಲಯದ ನಿರ್ವಹಣೆಯನ್ನು ರಾಮಚಂದ್ರಪುರ ಮಠಕ್ಕೆ ಹಸ್ತಾಂತರಿಸುವುದಾಗಿ ರಾಜ್ಯ ಸರ್ಕಾರದ ಆದೇಶಸಿತ್ತು. ಆ ಆದೇಶವನ್ನು ರದ್ದುಪಡಿಸಿದ 2018 ರ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ‘ರಾಮಚಂದ್ರಪುರ ಮಠ’ವು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ರಾಮಚಂದ್ರಪುರ ಮಠ ಸೇರಿದಂತೆ ಒಂದು ಗುಂಪು ಸಲ್ಲಿಸಿದ್ದ ಮನವಿಯ ಬಗ್ಗೆ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವು ಇಂದು ತೀರ್ಪು ನೀಡಿದೆ.

ಗೋಕರ್ಣ ಮಹಾಬಲೇಶ್ವರ ದೇವಸ್ಥಾನವು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ (ನಿವೃತ್ತ) ಶ್ರೀಕೃಷ್ಣ ನೇತೃತ್ವದ ಮೇಲ್ವಿಚಾರಣಾ ಸಮಿತಿಯಡಿಯಲ್ಲಿ ಕಾರ್ಯನಿರ್ವಹಿಸುವಂತೆ ಆದೇಶ ನೀಡಿದೆ.

ಮೇಲ್ಮನವಿ ಸಲ್ಲಿಸಿದ್ದ ‘ಮಠ’ವು ಎಲ್ಲಾ ಪದ್ಧತಿಗಳು ಮತ್ತು ಸಂಪ್ರದಾಯಗಳಿಗೆ ಅನುಸಾರವಾಗಿ ಕಾರ್ಯನಿರ್ವಹಿಸುವ ಸಮಿತಿಗೆ ನಿರ್ವಹಣೆಯನ್ನು ಹಸ್ತಾಂತರಿಸಬೇಕಾಗುತ್ತದೆ ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ತಿಳಿಸಿದೆ.

“ಮೇಲ್ವಿಚಾರಣಾ ಸಮಿತಿಯು ನ್ಯಾಯಮೂರ್ತಿ ಬಿ ಎನ್ ಶ್ರೀಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸಲಿದೆ ಎಂದು ನಾವು ನಿರ್ದೇಶಿಸುತ್ತೇವೆ. ಮೇಲ್ಮನವಿದಾರರು ಮೇಲ್ವಿಚಾರಣಾ ಸಮಿತಿಗೆ ವರದಿ ಸಲ್ಲಿಸುವ ಜವಾಬ್ದಾರಿಯನ್ನು ಸಹಾಯಕ ಆಯುಕ್ತರಿಗೆ ಹಸ್ತಾಂತರಿಸಬೇಕು” ಎಂದು ಸಿಜೆಐ ಹೇಳಿದೆ.

ಇದನ್ನೂ ಓದಿ: ಚೀನಾದೊಂದಿಗೆ ಸರ್ಕಾರದ ವ್ಯರ್ಥ ಮಾತುಕತೆಯಿಂದ ರಾಷ್ಟ್ರೀಯ ಭದ್ರತೆಗೆ ಅಪಾಯವಿದೆ: ರಾಹುಲ್ ಗಾಂಧಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights