ಪ್ರಮುಖ ಧಾರ್ಮಿಕ ಸಂಘಟನೆಯ ಮುಖ್ಯಸ್ಥ ನರೇಂದ್ರ ಗಿರಿ ಆತ್ಮಹತ್ಯೆ

ಪ್ರಮುಖ ಧಾರ್ಮಿಕ ಸಂಘಟನೆಯಾದ ಅಖಿಲ ಭಾರತೀಯ ಅಖಾಡ ಪರಿಷತ್ತಿನ ಮುಖ್ಯಸ್ಥ, ಉತ್ತರ ಪ್ರದೇಶ ಮೂಲದ ನರೇಂದ್ರ ಗಿರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ದೇಶದ ಅತ್ಯಂತ ದೊಡ್ಡ ಸಂತರ ಧಾರ್ಮಿಕ ಸಂಘಟನೆಗಳ ಮುಖ್ಯಸ್ಥರಾಗಿದ್ದ ನರೇಂದ್ರ ಗಿರಿ ಅವರ ಮೃತದೇಹ ಪ್ರಯಾಗರಾಜ್‌ನಲ್ಲಿರುವ ಅವರ ಮನೆಯಲ್ಲಿ ಪತ್ತೆಯಾಗಿದೆ. ಅವರ ಮೃತದೇಹದ ಬಳಿ ಆತ್ಮಹತ್ಯೆ ಪತ್ರವೂ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ನರೇಂದ್ರ ಗಿರಿ ಅವರಿಗೆ ಸಂತಾಪ ಸೂಚಿಸಿದ್ದಾರೆ.

“ಅಖಾಡ ಪರಿಷತ್ ಅಧ್ಯಕ್ಷರಾದ ನರೇಂದ್ರ ಗಿರಿ ಜೀ ಅವರ ಸಾವು ಅತ್ಯಂತ ದುಃಖಕರವಾಗಿದೆ. ಆಧ್ಯಾತ್ಮಿಕ ಸಂಪ್ರದಾಯಗಳಿಗೆ ಅರ್ಪಿತರಾಗಿದ್ದ ಅವರು ಸಂತ ಸಮಾಜದ ಅನೇಕರನ್ನು ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಭಗವಂತನ ಪಾದದಲ್ಲಿ ಅವರಿಗೆ ಸ್ಥಾನ ಸಿಗಲಿ. ಓಂ ಶಾಂತಿ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಐವರು ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ : ಡೆತ್ ನೋಟ್ ನಲ್ಲಿ ಭಯಾನಕ ಸತ್ಯ ಬಯಲು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights