ಕೊರೊನಾ ಸಂಕಷ್ಟದ ನಡುವೆಯೂ ಅಕ್ಟೋಬರ್ 01 ರಿಂದ ಪದವಿ ಕಾಲೇಜುಗಳು ಆರಂಭ!

ಕೊರೊನಾ ಸೋಂಕು ಕಾಣಿಸಿಕೊಂಡ ಸಂದರ್ಭದಲ್ಲಿ ಬಂದ್‌ ಆಗಿದ್ದ ಕಾಲೇಜುಗಳು ಕೊರೊನಾ ಸೋಂಕಿನ ಹಾವಳಿ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ತೆರೆಯಲು ಸಿದ್ದವಾಗಿವೆ. ರಾಜ್ಯದಲ್ಲಿ ಅಕ್ಟೋಬರ್ 01 ರಿಂದ ಪದವಿ ಕಾಲೇಜುಗಳನ್ನು ತೆರೆಯಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಇನ್ನು, ಸರ್ಕಾರದಿಂದ ಅಧಿಕೃತ ಆದೇಶ ಹೊರಬರಬೇಕಿದೆ.

ರಾಜ್ಯದ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳು ಆಕ್ಟೋಬರ್ 01ರಿಂದ ಆರಂಭವಾಗಲಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ತರಗತಿಗಳನ್ನು ನಡೆಸಲಾಗುವುದು. ಅಲ್ಲದೆ, ಸೆಪ್ಟೆಂಬರ್ 01 ರಿಂದ ಆನ್‌ಲೈನ್‌ ತರಗತಿಗಳೂ ಆರಂಭವಾಗಲಿವೆ ಎಂದು ತಿಳಿಸಿದ್ದಾರೆ.

ಸೆಪ್ಟೆಂಬರ್‌ ತಿಂಗಳಿನಲ್ಲಿ ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಮುಗಿದ ನಂತರ ಕಾಲೇಜುಗಳಲ್ಲಿ ತರಗತಿಗಳು ಆರಂಭವಾಗಲಿವೆ ಎಂದು ಹೇಳಲಾಗಿದೆ. ಅಲ್ಲದೆ, ಶಾಲೆಗಳು ಹಾಗೂ ಪಿಯುಸಿ ತರಗತಿಗಳನ್ನು ತೆರೆಯುವ ಬಗ್ಗೆ ಇನ್ನೂ ಯಾವುದೇ ಚಿಂತನೆ ನಡೆಸಿಲ್ಲ ಎಂದು ಹೇಳಲಾಗಿದೆ.

ಅನ್‌ಲಾನ್‌04ನಲ್ಲಿ ಕೇಂದ್ರ ಸರ್ಕಾರ ಹೊರಡಿಸುವ ಮಾರ್ಗ ಸೂಚಿಗನುಸಾರವಾಗಿ ಶಾಲೆಗಳನ್ನು ತೆರೆಯುವ ಬಗ್ಗೆ ನಿರ್ಧರಿಸಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಲ್ಲಾ ಸೆಮಿಸ್ಟರ್‌ಗಳಿಗೆ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ತೀವ್ರ ಟೀಕೆಗೆ ಗುರಿಯಾಗಿದೆ. ಆದರೆ, ಕಾನೂನು ವಿಶ್ವವಿದ್ಯಾನಿಲಯವು ಕಾನೂನು ಇಲಾಖೆ ಮತ್ತು ಬಾರ್ ನಿರ್ಧರಿಸಿದ ದಿನಾಂಕಗಳನ್ನು ಅನುಸರಿಸುತ್ತಿದೆ ಮತ್ತು ಇದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಲಾಗಿದೆ.


Read Also:  ಪುಲ್ವಾಮ ದಾಳಿ: ಎನ್ಐಎಯಿಂದ ಚಾರ್ಜ್ ಶೀಟ್, ಮಸೂದ್ ಅಜರ್ ಎ1 ಆರೋಪಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights