ದೇವಸ್ಥಾನಕ್ಕೆ ತೆರಳಿದ್ದ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ; ಸಂಘಪರಿವಾರದ ಐವರ ವಿರುದ್ದ ದೂರು ದಾಖಲು!

ದೇವಸ್ಥಾನಕ್ಕೆ ಪ್ರವಾಸ ಹೋಗಿದ್ದ ವಿದ್ಯಾರ್ಥಿಗಳ ಮೇಲೆ ಸಂಘಪರಿವಾರದವರು ಎನ್ನಲಾದ ಐವರು ಗೂಂಡಾಗಿರಿ ನಡೆಸಿರುವ ಘಟನೆ ಮಂಗಳೂರಿನ ಕಾರಿಂಜ ದೇವಸ್ಥಾನದ ಬಳಿ ನಡೆದಿದೆ.

ಈ ಬಗ್ಗೆ ವಿದ್ಯಾರ್ಥಿನಿಯೊಬ್ಬರು ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರು, ಮೂವರು ವಿದ್ಯಾರ್ಥಿಗಳು ಗುರುವಾರ ಸಂಜೆ ಕಾರಿಂಜ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ತೆರಳಿದ್ದರು. ಅವರು ದೇವಸ್ಥಾನದಿಂದ ಮರಳುವ ಸಂದರ್ಭದಲ್ಲಿ 5 ಮಂದಿಯ ಗುಂಪು ಅವರನ್ನು ತಡೆದು ದಾಂದಲಿ ನಡೆಸಿದೆ.

ವಿದ್ಯಾರ್ಥಿಗಳ ಗುಂಪಿನಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಇದ್ದದ್ದಕ್ಕೆ ಆ ಗುಂಪು ದಾಂದಲೆ ನಡೆಸಿದೆ ಎಂದು ಹೇಳಲಾಗಿದೆ.

ಈ ವೇಳೆ ಸ್ಥಳಕ್ಕೆ ಬಂದ ಪುಂಜಾಲಕಟ್ಟೆ ಪೊಲೀಸರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ನಮ್ಮನ್ನು ತಡೆದು ಗೂಂಡಾಗಿರಿ ನಡೆಸಿದ 5 ಮಂದಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ್ದಾರೆ‌.

ಇದನ್ನೂ ಓದಿ: ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಪೊಲೀಸರಿಗೆ ದೊರೆತಿವೆ 34 ಸಾಕ್ಷ್ಯಗಳು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights