ಕಬ್ಬನ್ ಪಾರ್ಕ್‌ನಲ್ಲಿ ವಾಹನಗಳ ನಿಷೇಧಕ್ಕಾಗಿ ತೋಟಗಾರಿಕೆ ಇಲಾಖೆಯಿಂದ ಸಿಎಂಗೆ ಮನವಿ..

ಕಬ್ಬನ್ ಪಾರ್ಕ್‌ನಲ್ಲಿ ವಾಹನಗಳನ್ನು ನಿಷೇಧಿಸಲು ತೋಟಗಾರಿಕೆ ಇಲಾಖೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಒಳಗೆ ವಾಹನ ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲು ತೋಟಗಾರಿಕೆ ಇಲಾಖೆ ಮಂಗಳವಾರ ನಿರ್ಧರಿಸಿದೆ.

ಆದರೆ ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರ ಅಂತಿಮ ಅನುಮೋದನೆ ಬೇಕಾಗುತ್ತದೆ. ಕಬ್ಬನ್ ಪಾರ್ಕ್ ಒಳಗೆ ವಾಹನಗಳ ಸಂಚಾರವನ್ನು ನಿಷೇಧಿಸುವಂತೆ ಪ್ರಕೃತಿ ಪ್ರಿಯರು ಬಹುಕಾಲದಿಂದ ಒತ್ತಾಯಿಸಿದ್ದಾರೆ ಎಂದು ತೋಟಗಾರಿಕೆ ಸಚಿವ ಕೆ.ಸಿ.ನಾರಾಯಣ ಗೌಡ ಹೇಳಿದ್ದಾರೆ.

“ಕಬ್ಬನ್ ಪಾರ್ಕ್ 1975 ರ ಕರ್ನಾಟಕ ಸರ್ಕಾರಿ ಉದ್ಯಾನಗಳ (ಸಂರಕ್ಷಣೆ) ಕಾಯ್ದೆಯಡಿ ಬರುತ್ತದೆ, ಆದ್ದರಿಂದ ವಾಹನಗಳನ್ನು ನಿಷೇಧಿಸುವುದು ಅವಶ್ಯಕ” ಎಂದು ತೋಟಗಾರಿಕೆ ಸಚಿವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತೋಟಗಾರಿಕೆ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಬ್ಬನ್ ಪಾರ್ಕ್ ಒಳಗೆ ಚಲಿಸುವ ವಾಹನಗಳನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.

197 ಎಕರೆ ಕಬ್ಬನ್ ಪಾರ್ಕ್ ಆವರಣದಲ್ಲಿ ವಾಹನಗಳನ್ನು ನಿಷೇಧಿಸುವಂತೆ ಯಡಿಯೂರಪ್ಪ ಅವರಿಗೆ ಒತ್ತಾಯಿಸಲಾಗಿದೆ. ಸಿಎಂ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ನಿರೀಕ್ಷೆಯಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಕಬ್ಬನ್ ಪಾರ್ಕ್ನಲ್ಲಿ ಪ್ರತಿ ಭಾನುವಾರ ಮತ್ತು ಎರಡನೇ ಮತ್ತು ನಾಲ್ಕನೇ ಶನಿವಾರ ಸೇರಿದಂತೆ ಎಲ್ಲಾ ಸಾರ್ವಜನಿಕ ರಜಾದಿನಗಳಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತದೆ.

ಜೊತೆಗೆ “ಪ್ರತಿದಿನ ರಾತ್ರಿ 10 ರಿಂದ ಬೆಳಿಗ್ಗೆ 8 ರವರೆಗೆ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ವಾಕಿಂಗ್ಗಾಗಿ ಸುಮಾರು 4,000-5,000 ಜನರು ಕಬ್ಬನ್ ಪಾರ್ಕ್‌ಗೆ ಭೇಟಿ ನೀಡುತ್ತಾರೆ. ಉದ್ಯಾನವನವನ್ನು ನೋಡಲು ಸಾವಿರಾರು ಜನರು ಕೂಡ ಬರುತ್ತಾರೆ. ಅಂತಹ ಸ್ಥಳವನ್ನು ಪರಿಸರ ಸ್ನೇಹಿಯಾಗಿರಿಸುವುದು ಸರ್ಕಾರದ ಉದ್ದೇಶ. ಕಬ್ಬನ್ ಪಾರ್ಕ್ ಲಾಲ್ ಬಾಗ್ ಆಗಬೇಕಾದರೆ ನಾವು ವಾತಾವರಣವನ್ನು ಸ್ವಚ್ಚವಾಗಿಡಬೇಕು, ”ಎಂದು ಸಚಿವರು ಹೇಳಿದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights