ಹುಬ್ಬಳ್ಳಿ-ಧಾರವಾಡ: ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್‌ ಹೀನಾಯ ಸೋಲು; ಕೋನರೆಡ್ಡಿ ರಾಜೀನಾಮೆ!

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷವು ಹೀನಾಯವಾಗಿ ಸೋಲುಂಡಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಎಚ್.ಕೋನರೆಡ್ಡಿ ಅವರು ಸೋಲಿನ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಚುನಾವಣಾ ಉಸ್ತುವಾರಿಯನ್ನು ಕೋನರೆಡ್ಡಿ ಹೊತ್ತಿದ್ದರು. ಆದರೆ, ಚುನಾವಣೆಯಲ್ಲಿ ಪಕ್ಷವು ಕೇವಲ ಒಂದು ಸ್ಥಾನದಲ್ಲಿ ಮಾತ್ರ ಗೆದ್ದಿದ್ದು, ಹೀನಾಯ ಪ್ರದರ್ಶನ ನೀಡಿದೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕೋನರೆಡ್ಡಿ, ಪಕ್ಷದ ಕಾರ್ಯಕರ್ತರು ಶ್ರಮಿಸಿದ್ದರೂ ಮತದಾರರು ಚುನಾವಣೆಯಲ್ಲಿ ತಮಗೆ ಮತ ಹಾಕಿಲ್ಲ. ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ತಮ್ಮ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಶ್ರಮಿಸಿದರೂ ಅದು ಪಕ್ಷದ ಸಾಧ್ಯವಾಗಿಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಸಂಘಟನೆಗೆ ಶ್ರಮಿಸುತ್ತೇನೆ. ತಮ್ಮ ರಾಜೀನಾಮೆಯನ್ನು ಪಕ್ಷದ ವರಿಷ್ಟರು ಒಪ್ಪಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಅಲ್ಲದೆ, ಚುನಾವಣೆ ಪಾರದರ್ಶಕವಾಗಿ ನಡೆದಿಲ್ಲ. ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ, ಸರ್ಕಾರದ ಹಂಗಿಲ್ಲಿಯೇ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಜೆಡಿಎಸ್‌ ಭದ್ರಕೋಟೆಯಲ್ಲಿ ಗೆದ್ದ ಕಾಂಗ್ರೆಸ್‌; ಠೇವಣಿ ಕಳೆದುಕೊಂಡ ಜೆಡಿಎಸ್‌ ಅಭ್ಯರ್ಥಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights