ನಾನು ದೆಹಲಿ ಸಿಎಂ ಕೇಜ್ರಿವಾಲ್‌ ಅವರ ದೊಡ್ಡ ಅಭಿಮಾನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್

ದೆಹಲಿಯಲ್ಲಿನ ಮೊಹಲ್ಲಾ ಕ್ಲಿನಿಕ್, ಸರಕಾರಿ ಶಾಲೆಗಳನ್ನು ನೋಡಿ, ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕ್ರಾಂತಿಕಾರಕ ಬದಲಾವಣೆಗಳನ್ನು ನೋಡಿ ಅವರ ದೊಡ್ಡ ಅಭಿಮಾನಿಯಾದೆ ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಶಾಂತಿನಗರದ ಬಸಪ್ಪ ರಸ್ತೆಯಲ್ಲಿ ಇರುವ ಆಮ್ ಆದ್ಮಿ ಕ್ಲಿನಿಕ್ ಕಾರ್ಯವೈಖರಿ ವೀಕ್ಷಿಸಿ ಮಾತನಾಡಿದ ಅವರು, ನಾನು ಆರೋಗ್ಯ ಸಚಿವನಾಗಿದ್ದಾಗ ಹೊಸದಿಲ್ಲಿಗೆ ಭೇಟಿಕೊಟ್ಟಿದೆ. ಆರೋಗ್ಯ, ಶಿಕ್ಷಣ, ಉಚಿತ ನೀರು, ವಿದ್ಯುತ್, ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿದ್ದಾರೆ. ಇದು ಎಲ್ಲಾ ರಾಜ್ಯಗಳಲ್ಲೂ ಆಗಬೇಕು. ಕೇಜ್ರಿವಾಲ್ ಅವರಿಗೆ ದಿಲ್ಲಿ ಜನತೆ ಒಂದೇ ಒಂದು ಬಾರೀ ಅವಕಾಶ ಕೊಟ್ಟರು. ಈ ಅವಕಾಶವನ್ನು ಅವರು ಜನಪರ ಸೇವೆ ಮಾಡುವುದಕ್ಕೆ ಬಳಸಿಕೊಂಡರು ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೆಂಗಳೂರಿನ ಶಾಂತಿನಗರದಲ್ಲಿ ಪ್ರಾರಂಭಿಸಿರುವ ಈ ದಿಲ್ಲಿ ಮಾದರಿಯ ಮೊಹಲ್ಲಾ ಕ್ಲಿನಿಕ್ ನೋಡಿ ಸಂತೋಷವಾಗಿದೆ. ಯಾವುದೇ ರೀತಿಯ ಅಂತಸ್ತು, ಆದಾಯ, ಜಾತಿ ಕೇಳದೆ ಎಲ್ಲರಿಗೂ ಈ ಸೌಲಭ್ಯ ವಿಸ್ತರಿಸಿರುವುದು ಮೆಚ್ಚುಗೆಯ ಅಂಶವಾಗಿದೆ ಎಂದು ಅವರು ತಿಳಿಸಿದ್ದಾರೆ.

ಆಮ್ ಆದ್ಮಿ ಕ್ಲಿನಿಕ್ ಒಳಗೆ ಬಂದರೆ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣುಮಕ್ಕಳೇ ಇದ್ದಾರೆ, ಇವರೆಲ್ಲ ಮನೆಗೆಲಸಕ್ಕೆ ಹೋಗುವಂತಹ ಹೆಣ್ಣುಮಕ್ಕಳು. ಇಂತಹ ಕಟ್ಟ ಕಡೆಯ ಜನರ ಸೇವೆಗೆ ನಿಂತಿರುವ ಆಮ್ ಆದ್ಮಿಗಳಿಗೆ ಅಭಿನಂದನೆಗಳು ಎಂದಿದ್ದಾರೆ.

ಈ ವೇಳೆ ಪಕ್ಷದ ಸಂಚಾಲಕ ಪೃಥ್ವಿ ರೆಡ್ಡಿ, ಕಾರ್ಯದರ್ಶಿ ಸಂಚಿತ್ ಸಹಾನಿ, ಹಿರಿಯ ಮುಖಂಡರಾದ ಗೋಪಾಲ್ ರೆಡ್ಡಿ, ಹರಿಹರನ್, ರೇಣುಕಾ ವಿಶ್ವನಾಥನ್, ಜಂಟಿ ಕಾರ್ಯದರ್ಶಿ ದರ್ಶನ್, ಮುಖ್ಯ ವಕ್ತಾರ ಶರತ್ ಖಾದ್ರಿ, ಉಪಾಧ್ಯಕ್ಷ ಸುರೇಶ್ ರಾಥೋಡ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಪೊಲೀಸರೇ ಸರ್ಕಾರದ ಕೈಗೊಂಬೆಯಾಗಬೇಡಿ; ರೈತರ ಟ್ರಾಕ್ಟರ್ ಜಪ್ತಿ ಮಾಡಿದ್ರೆ ಬಿಡಿಸಲು ನಾವೇ ಬರ್ತೀವಿ: ಪೊಲೀಸರಿಗೆ ಡಿಕೆಶಿ ಎಚ್ಚರಿಕೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights