ಹಸಿರು ಪಟಾಕಿ ಎಂದರೆ ನನಗೆ ಗೊತ್ತಿಲ್ಲ ಎಂದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್..!
ಹಸಿರು ಪಟಾಕಿ ಎಂದರೇನು? ಎಂಬ ಮಾಧ್ಯಮದವರ ಪ್ರಶ್ನಿಗೆ ಸಚಿವ ಡಾ. ಕೆ. ಸುಧಾಕರ್ ಹಸಿರು ಪಟಾಕಿ ಎಂದರೆ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಸಿದ್ದು ಭಾರೀ ಅಚ್ಚರಿ ಮೂಡಿಸಿದೆ.
ರಾಜ್ಯ ಸರ್ಕಾರ ಈ ಬಾರಿ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಿದೆ. ಆದರೆ ಬಿಜೆಪಿಯಲ್ಲೇ ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಈ ವೇಳೆ ಸಿಎಂ ಯಡಿಯೂರಪ್ಪ ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಆದರೆ ಹಸಿರು ಪಟಾಕಿ ಅಂದರೆ ಯಾವುದು..? ಇದರ ಬಗ್ಗೆ ಯಾರಿಗೂ ಸರಿಯಾದ ಮಾಹಿತಿ ಇಲ್ಲ.
ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರನ್ನು ಪ್ರಶ್ನಿಸಿದಾಗ ಸಚಿವರು ಹಸಿರು ಪಟಾಕಿ ಎಂದರೇನು? ನನಗೆ ಗೊತ್ತಿಲ್ಲ ಎಂದು ಉತ್ತರಿಸಿದ್ದಾರೆ. ಈ ಬಗ್ಗೆ ಸವಿವರವಾಗಿ ತಿಳಿದುಕೊಂಡು ಹೇಳುತ್ತೇನೆಂದಿದ್ದಾರೆ. ಪಟಾಕಿ ನಿಷೇಧದ ಬಗ್ಗೆ ನಮ್ಮ ಇಲಾಖೆಯಿಂದ ಮಾರ್ಗಸೂಚಿ ವರದಿ ಬಂದಿದೆ. ಅದನ್ನು ಸಿಎಂ ಗಮನಕ್ಕೆ ತಂದು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿದ್ದೇನೆ. ಆ ನಂತರ ಸಿಎಂ ಹಸಿರು ಪಟಾಕಿ ಹೊಡೆಯಲು ಅವಕಾಶ ನೀಡಿದ್ದಾರೆ. ಆದರೆ, ನನಗೆ ಹಸಿರು ಪಟಾಕಿ ಎಂದರೇನು ಎಂಬ ಬಗ್ಗೆ ಗೊತ್ತಿಲ್ಲ. ಈ ಬಗ್ಗೆ ನಾನು ತಿಳಿದುಕೊಂಡು ಹೇಳುತ್ತೇನೆ ಎಂದಿದ್ದಾರೆ.