ಮೈಸೂರಲ್ಲಿ IASಗಳ ಕಾಳಗ; ಶಿಲ್ಪಾನಾಗ್ ಆರೋಪಕ್ಕೆ ಸಿಂಧೂರಿ ಪ್ರತ್ಯುತ್ತರ!

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಅಲ್ಲಿನ ಸಂಸದ-ಶಾಸಕರು ಹಲವಾರು ಆರೋಪಗಳು, ಹೇಳಿಕೆಗಳನ್ನು ಕೊಡುತ್ತಲ್ಲೇ ಇದ್ದಾರೆ. ಇದೀಗ ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪನಾಗ್‌ ಕೂಡ ಸಿಂಧೂರಿ ವಿರುದ್ಧ ಆರೋಪಗಳನ್ನು ಮಾಡಿದ್ದು, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ನಗರದಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲು ಜಿಲ್ಲಾಡಳಿತದಿಂದ ನಮಗೆ ನೆರವು ಸಿಗುತ್ತಿಲ್ಲ ಎಂದು ಶಿಲ್ಪಾನಾಗ್‌ ಆರೋಪಿಸಿದ್ದರು. ಈ ಆರೋಪಗಳಿಗೆ ಕೆಲವು ಸಹಜ ಸ್ಪಷ್ಟನೆಗಳನ್ನು ನೀಡಿ ಸಿಂಧೂರಿ ಕೈತೊಳೆದುಕೊಂಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ರೋಹಿಣಿ ಸಿಂಧೂರಿ, ಪಾಲಿಕೆಯ ಆಯುಕ್ತರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ನನ್ನ ಹಾಗೂ ಜಿಲ್ಲಾಡಳಿತದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ನನ್ನ ಮೇಲೆ ಹೊರಿಸಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ನಾನು ಯಾರಿಗೂ ಕಿರುಕುಳ ನೀಡಿಲ್ಲ ಎಂದು ಸಿಂಧೂರಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಜೂನ್​ 14ರವರೆಗೆ ಲಾಕ್​ಡೌನ್ ವಿಸ್ತರಣೆ; ಮತ್ತೆ ಒಂದು ವಾರ ಎಲ್ಲವೂ ಬಂದ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights