ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೊರೊನಾ ಕೇಸ್-ಆತಂಕ ವ್ಯಕ್ತಪಡಿಸಿದ ಡಾ.ಸುಧಾಕರ್!

ಗಡಿಭಾಗದ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಆತಂಕ ವ್ಯಕ್ತಪಡಿಸಿದ್ದಾರೆ.

ಹೌದು… ಮಹಾರಾಷ್ಟ್ರದಲ್ಲಿ 24 ಗಂಟೆಯಲ್ಲಿ 13000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿದ್ದು ಇದು ನನ್ನನ್ನು ಚಿಂತೆಗೀಡಾಗಿಸಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನು ಎಚ್ಚರಿಕೆ ಗಂಟೆ ಎಂದು ಪರಿಗಣಿಸಿ, ಹಬ್ಬಹರಿದಿನಗಳು, ಸಭೆ ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಜನಸಂದಣಿಯಿಂದ ದೂರವಿರಿ ಎಂದು ಮನವಿ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ಈ ವರೆಗೆ 22,52,057 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇವರಲ್ಲಿ 20,99,207 ಜನ ಗುಣಮುಖರಾಗಿದ್ದು, 52,610 ಜನ ಮಹಾಮಾರಿಗೆ ಸಾವನ್ನಪ್ಪಿದ್ದಾರೆ. ಇನ್ನು 99,008 ಸಕ್ರಿಯ ಪ್ರಕರಣಗಳು ಇವೆ. ಇನ್ನೂ ಕರ್ನಾಟಕದಲ್ಲಿ 10,83,531 ಜನರಿಗೆ ಸೋಂಕು ತಗುಲಿದ್ದು, 10,43,473 ಜನ ಗುಣಮುಖರಾಗಿದ್ದು, 4,343 ಜನ ಸಾವನ್ನಪ್ಪಿದ್ದಾರೆ. ಇದರಲ್ಲಿ 35,415 ಸಕ್ರಿಯ ಪ್ರಕರಣಗಳಿವೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights