ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ?: ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧೆಸುವ ಬಗ್ಗೆ ಹೇಳಿದ ನಂತರ ರಾಜಕೀಯ ಸಂಚಲನ!

ಮಹಾರಾಷ್ಟ್ರದ ಕಾಂಗ್ರೆಸ್ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಇಚ್ಛೆಯನ್ನು ವ್ಯಕ್ತಪಡಿಸುತ್ತಿದೆ. ಹೀಗಾಗಿ, ಮೈತ್ರಿ ಸರ್ಕಾರದಲ್ಲಿ ಅವರ ಮಿತ್ರ ಪಕ್ಷವಾಗಿರುವ ಶಿವಸೇನೆ, 2024 ರ ಚುನಾವಣೆಗಳು ಇನ್ನೂ ದೂರದಲ್ಲಿವೆ. ಹಾಗೂ, ಮಧ್ಯಂತರ ಚುನಾವಣೆ ನಡೆಯುವ ಯಾವುದೇ ಯೋಜನೆ ಇದೆಯೇ ಎಂದು ತಿಳಿಯಲು ಪ್ರಯತ್ನಿಸಿದೆ.

ಪಕ್ಷದ ಮುಖವಾಣಿ ‘ಸಮ್ನಾ’ದ ಸಂಪಾದಕೀಯದಲ್ಲಿ, ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಮಾತನಾಡಲು ಪ್ರಾರಂಭಿಸಿವೆ. ಹೀಗಾಗಿ ಸೇನಾ ಮತ್ತು ಎನ್‌ಸಿಪಿ ಮುಂದಿನ ಚುನಾವಣೆಗಳಲ್ಲಿ ಮಹಾರಾಷ್ಟ್ರದ ಹಿತದೃಷ್ಟಿಯಿಂದ ಒಟ್ಟಾಗಿ ಸ್ಪರ್ಧಿಸಬೇಕಾಗುತ್ತದೆ ಎಂದು ಶಿವಸೇನಾ ಹೇಳಿದೆ.

ಕಾಂಗ್ರೆಸ್ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಪ್ರಮುಖ ಘಟಕವಾಗಿದ್ದರೂ ಅದು ಮೂರನೇ ಸ್ಥಾನದಲ್ಲಿದೆ ಎಂದು ಪಕ್ಷ ಹೇಳಿದೆ.

ಬಿಜೆಪಿಯ ಹಳೆಯ ಮಿತ್ರಕೂಟದಲ್ಲಿ ಒಂದಾಗಿದ್ದ ಶಿವಸೇನೆ, 2019 ರ ರಾಜ್ಯ ಚುನಾವಣೆಯ ನಂತರ ಬಿಜೆಪಿಯೊಂದಿಗೆ ಮುಖ್ಯಮಂತ್ರಿ ಹುದ್ದೆಗಾಗಿ ನಡೆದ ಸಂಘರ್ಷದಿಂದ ಮೈತ್ರಿಯಿಂದ ಹೊರಬಂದಿತು. ಅಲ್ಲದೆ, ಎಂವಿಎ ಸರ್ಕಾರ ರಚಿಸಲು ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಅಸಂಭಾವಿಕ ಮೈತ್ರಿ ಮಾಡಿಕೊಂಡಿದೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಪ್ರಮಾಣವಚ ಸ್ವೀಕಾರಕ್ಕೆ ಕ್ಷಣಗಣನೆ; ರಾಜ್ಯದ ರೈತರ ಸಾಲಮನ್ನಾ  - Karnataka Crime News: Latest Crime Headlines | Police Varthe

“ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಅವರು ತಮ್ಮ ಪಕ್ಷವು ಮುಂದಿನ ವಿಧಾನಸಭಾ ಚುನಾವಣೆಗೆ ಏಕಾಂಗಿಯಾಗಿ ಕಣಕ್ಕಿಳಿಯಲಿದೆ ಮತ್ತು ಕಾಂಗ್ರೆಸ್ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದೆ ಎಂದು ಹೇಳಿದ್ದಾರೆ. ಪಕ್ಷಕ್ಕೆ ಅವಕಾಶ ನೀಡಿದರೆ ಅವರೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದೂ ಅವರು ಹೇಳಿದ್ದಾರೆ. 2024 ರಲ್ಲಿ ಪಟೋಲೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವವರೆಗೂ ಅವರು ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದು ಸೇನಾ ಹೇಳಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಕಾಣೆಯಾಗಿದ್ದ 56 ಯುವತಿಯರು ಮರಳಿ ಮನೆಗೆ!

“ಆದಾಗ್ಯೂ, ಉಪ ಮುಖ್ಯಮಂತ್ರಿ (ಮತ್ತು ಎನ್‌ಸಿಪಿ ನಾಯಕ) ಅಜಿತ್ ಪವಾರ್ ಅವರು ಮಹಾರಾಷ್ಟ್ರದ 288 ವಿಧಾನಸಭಾ ಸ್ಥಾನಗಳ ಪೈಕಿ ಎನ್‌ಸಿಪಿ 145 ಸ್ಥಾನಗಳನ್ನು ಗೆಲ್ಲಲಿದೆ. ಮುಂದಿನ ಸರ್ಕಾರವನ್ನು ಎನ್‌ಸಿಪಿ ರಚಿಸಲಿದೆ ಎಂದು ಹೇಳಿದ್ದಾರೆ. ಅವರ ಹೇಳಿಕೆ ಸಂಸದೀಯ ಪ್ರಜಾಪ್ರಭುತ್ವವು ಬಹುಮತದ ವ್ಯಕ್ತಿಗಳ ಕುರಿತಾಗಿದೆ. ಅದರಲ್ಲಿ ಯಶಸ್ವಿಯಾದವರು ಸಿಂಹಾಸನವನ್ನು ಪಡೆಯಲು ಸಾಧ್ಯವಾಗುತ್ತದೆ” ಎಂದು ಸೇನಾ ಹೇಳಿದೆ.

ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಆಶ್ರಯಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಅವುಗಳ ನೆರವೇರಿಕೆಗೆ ಸಂಖ್ಯೆಗಳು ಬೇಕಾಗುತ್ತವೆ. ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಅವರು ಮತ್ತೆ ಅಧಿಕಾರಕ್ಕೆ ಬರುವುದಾಗಿ ಹೇಳಿದ್ದರು. ಆದರೆ ಅವರಿಗೆ ಅದು ಸಾಧ್ಯವಾಗಲಿಲ್ಲ.

ಬಿಜೆಪಿ 105 ಸ್ಥಾನಗಳನ್ನು ಗೆದ್ದಿದ್ದರೂ, ಇತರ ಮೂರು ಪಕ್ಷಗಳು (ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್) ಸಮ್ಮಿಶ್ರ ಸರ್ಕಾರವನ್ನು ರಚಿಸಿದವು. ಪಕ್ಷದ ಕಾರ್ಯಕರ್ತರ ಸ್ಥೈರ್ಯವನ್ನು ಹೆಚ್ಚಿಸಲು ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸುವ ಬಗ್ಗೆ ಪಟೋಲ್ ಮಾತನಾಡಿದ್ದಾರೆ ಎಂದು ಶಿವಸೇನಾ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಮಾಜಿ ಡಿಸಿಎಂ ಅನಿಲ್‌ ದೇಶ್ಮುಖ್‌ ವಿರುದ್ಧ CBI ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ!

ಪಟೋಲೆ ಅವರ ಹೇಳಿಕೆಯ ನಂತರ, ಬಿಜೆಪಿ ಹಿರಿಯ ಮುಖಂಡ ರೌಸಹೇಬ್ ಡ್ಯಾನ್ವೆ ಅವರು ತಮ್ಮ ಪಕ್ಷವೂ ಮುಂದಿನ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಬಿಜೆಪಿ-ಶಿವಸೇನಾ ಮೈತ್ರಿ ಅಸಾಧ್ಯವೆಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಯಾವುದೇ ಪಕ್ಷವಿಲ್ಲ. ಆದ್ದರಿಂದ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿಯೇ ಸ್ಪರ್ಧಿಸಬೇಕಾಗಿರುವುದು ಸ್ಪಷ್ಟವಾಗಿದೆ ಎಂದು ಸೇನಾ ಹೇಳಿದೆ.

“2024 ರ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳು ಇನ್ನೂ ದೂರದಲ್ಲಿವೆ. ಆದರೆ ಪ್ರಮುಖ ರಾಜಕೀಯ ಪಕ್ಷಗಳು (ಬಿಜೆಪಿ ಮತ್ತು ಕಾಂಗ್ರೆಸ್) ಇದ್ದಕ್ಕಿದ್ದಂತೆ ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಮಾತನಾಡುತ್ತಿವೆ. ಮಧ್ಯಕಾಲೀನ ಚುನಾವಣೆ ನಡೆಸಲು ಯಾವುದಾದರೂ ಯೋಜನೆ ಇದೆಯೇ?” ಎಂದು ಸೇನಾ ಕೇಳಿದೆ.

“ರಾಜ್ಯವು ಪ್ರತಿದಿನ ಹೊಸ ಬಿಕ್ಕಟ್ಟನ್ನು ಎದುರಿಸುತ್ತಿದೆ. ರಾಜಕೀಯದಲ್ಲಿನ ಕೆಲವು ದುಷ್ಟ ಶಕ್ತಿಗಳು ರಾಜ್ಯವು ರಾಜಕೀಯವಾಗಿ ಮತ್ತು ಆರ್ಥಿಕವಾಗಿ ದುರ್ಬಲಗೊಳಿಸಲು ಪ್ರಯತ್ನಿಸುತ್ತಿವೆ” ಎಂದು ಅದು ಹೇಳಿದೆ.

“ಮುಖ್ಯ ರಾಜಕೀಯ ಪಕ್ಷಗಳು ಏಕಾಂಗಿಯಾಗಿ ಹೋಗುವ ಬಗ್ಗೆ ಮಾತನಾಡುತ್ತಿದ್ದರೆ, ಇತರ ಎರಡು ಪಕ್ಷಗಳಾದ ಶಿವಸೇನೆ ಮತ್ತು ಎನ್‌ಸಿಪಿ ರಾಜ್ಯದ ಹಿತದೃಷ್ಟಿಯಿಂದ ಕೈಜೋಡಿಸಬೇಕಾಗುತ್ತದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಈಗಾಗಲೇ ಈ ಬಗ್ಗೆ ಮಾತನಾಡಿದ್ದಾರೆ” ಎಂದು ಆಡಳಿತ ಪಕ್ಷ ಹೇಳಿದೆ.

ಇದನ್ನೂ ಓದಿ: ದೇಶದ ಏಕದಿನ ಕೊರೊನಾ ಪ್ರಕರಣಗಳಲ್ಲಿ ಮಹಾರಾಷ್ಟ್ರವನ್ನು ಮೀರಿಸಿದ ಕರ್ನಾಟಕ…!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights