ಕನ್ಹಯ್ಯಾ ಕುಮಾರ್, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಸೇರುವ ಸಾಧ್ಯತೆ..!

ಜೆಎನ್ಯು ವಿದ್ಯಾರ್ಥಿ ಘಟಕದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರು ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗುತ್ತಿದೆ. ಇವರು ಸೆಪ್ಟೆಂಬರ್ 28 ರಂದು ಸೇರಲು ನಿರ್ಧರಿಸಲಾಗಿತ್ತು, ಆದರೆ ಆ ದಿನಾಂಕವನ್ನು ಮುಂದಿನ ತಿಂಗಳಿಗೆ ಮುಂದೂಡಲಾಗಿದೆ. ಅಕ್ಟೋಬರ್ 2 ರಂದು ನಡೆಯುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಕನ್ಹಯ್ಯ ಕುಮಾರ್ ಮತ್ತು ಜಿಗ್ನೇಶ್ ಮೇವಾನಿ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ಇಂದು ತಿಳಿಸಿವೆ.

ವಡ್ಗಮ್ ಕ್ಷೇತ್ರವನ್ನು ಪ್ರತಿನಿಧಿಸುವ ದಲಿತ ನಾಯಕ ಶ್ರೀ ಮೇವಾನಿ ಅವರನ್ನು ಪಕ್ಷದ ರಾಜ್ಯ ಘಟಕದ ಕಾರ್ಯಾಧ್ಯಕ್ಷರನ್ನಾಗಿ ಮಾಡಬಹುದು ಎಂದು ಮೂಲಗಳು ತಿಳಿಸಿವೆ.

ಅವರ ಅಂತಿಮ ಪಾತ್ರ ಏನೇ ಇರಲಿ, ಮುಂದಿನ ವರ್ಷ ಗುಜರಾತ್, ಪಂಜಾಬ್ ಮತ್ತು ಉತ್ತರ ಪ್ರದೇಶ ಸೇರಿದಂತೆ ಏಳು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ವೋಟ್ ಬ್ಯಾಂಕ್ ಗಣಿತದ ಮೇಲೆ ಕಾಂಗ್ರೆಸ್ ಗಮನ ಕೇಂದ್ರೀಕರಿಸಿದೆ ಎಂಬುದಕ್ಕೆ ಶ್ರೀ ಮೇವಾನಿ ಅವರ ಸೇರ್ಪಡೆ ಮತ್ತಷ್ಟು ಸಾಕ್ಷಿಯಾಗಿದೆ.

ಪ್ರತಿ ರಾಜ್ಯದ ಜನಸಂಖ್ಯೆಯ ಗಮನಾರ್ಹ ಶೇಕಡಾವನ್ನು ದಲಿತ ಸಮುದಾಯ ಹೊಂದಿದೆ. ಹೀಗಾಗಿ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದ ಕನ್ಹಯ್ಯ ಕುಮಾರ್ ಸೇರಿದಂತೆ ಇತರ ಎಡ ನಾಯಕರನ್ನು ಕರೆತರುವ ನಿರೀಕ್ಷೆಯಿದೆ.

2022 ರಲ್ಲಿ ರಾಜ್ಯ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಯುವ ಮತ್ತು ಕ್ರಿಯಾತ್ಮಕ ಮುಖಗಳನ್ನು ನೇಮಿಸಿಕೊಳ್ಳಲು ಕಾಂಗ್ರೆಸ್ ಮೇವಾನಿ ಮತ್ತು ಶ್ರೀ ಕುಮಾರ್ ಅವರಿಗೆ ಮಣೆ ಹಾಕಿದೆ. ಮಾತ್ರವಲ್ಲದೆ ಎರಡು ವಾರಗಳಲ್ಲಿ ಎರಡು ಬಾರಿ ಇವರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾಗಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights