‘ಕೊಡವರು ಗೋಮಾಂಸ ತಿನ್ನುತ್ತಾರೆ’ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ!

ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೊಡವರು ಅತೀ ಹೆಚ್ಚು ಗೋಮಾಂಸ ತಿನ್ನುತ್ತಾರೆಂದು ಹೇಳಿದ್ದರು. ಇದಕ್ಕೆ ಸಾಕಷ್ಟು ಖಂಡನೆ ವ್ಯಕ್ತವಾಗಿದ್ದು ಮಡಿಕೇರಿಯಲ್ಲಿ ಜನ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.

ಹೇಳಿಕೆಯನ್ನು ವಾಪಸ್ ಪಡೆದು ಕೊಡವರಿಗೆ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಮುಂದೆ ಮಡಿಕೇರಿ ಕೊಡವ ಸಮಾಜ, ಪೊನ್ನಪೇಟೆ ಕೊಡವ ಸಮಾಜ, ಮಡಿಕೇರಿ ಹಿತ ರಕ್ಷನಾ ವೇದಿಕೆ ಮತ್ತಿತರ ಸಂಘಟನೆ ಸದಸ್ಯರು ಜಮಾವಣೆಗೊಂಡು ಘೋಷಣೆ ಕೂಗಿ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿದ್ದಾರೆ. ಕಾವೇರಿ ಮಾತೆ, ಇಗ್ಗತ್ತಪ್ಪ, ಕೊಡವ ಕುಲಕ್ಕೆ ಪ್ರತಿಭಟನಕಾರರು ಜಯಕಾರ ಹಾಕಿದರು.

ಸಿದ್ದರಾಮಯ್ಯ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಮಾತ್ರವಲ್ಲದೇ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಪ್ರತಿಭಟನಕಾರರು ಆಗ್ರಮಹಿಸಿದ್ದಾರೆ. ಹೇಳಿಕೆಯಿಂದ ಕೊಡವ ಸಮುದಾಯಕ್ಕೆ ಅಪಮಾನವಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights