ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ!

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿದ್ದ ಅರವಿಂದ್‌ ಲಿಂಬಾವಳಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇತ್ತೀಚೆಗೆ ವಿಸ್ತರಣೆಯಾದ ಸಚಿವ ಸಂಪುಟದಲ್ಲಿ ಸ್ಥಾನ ಪಡೆದುಕೊಂಡು, ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳನ್ನು ತನ್ನ ಬತ್ತಳಿಕೆಗೆ ತೆಗೆದುಕೊಂಡಿರುವ ಅರವಿಂದ ಲಿಂಬಾವಳಿ, ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಪಕ್ಷದಲ್ಲಿ ಒಬ್ಬ ವ್ಯಕ್ತಿ, ಒಂದು ಹುದ್ದೆ ಎನ್ನುವ ಸಿದ್ಧಾಂತವಿದ್ದು, ಇದರನ್ವಯ ನಾನು ಸಚಿವ ಸ್ಥಾನ ಪಡೆದುಕೊಂಡಿರುವುದರಿಂದ, ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಲಿಂಬಾವಳಿ, ಪಕ್ಷದ ರಾಜ್ಯ ಉಪಾದ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ ಸಂದರ್ಭದಲ್ಲಿ ತಮಗೆ ಸಹಕಾರ, ಮಾರ್ಗದರ್ಶನ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ಬಾದಾಮಿಯಲ್ಲಿ ನನ್ನನ್ನು ಸೋಲಿಸಿದ್ದು ಜನರಲ್ಲ, BJP ನಾಯಕರು: ಶ್ರೀರಾಮುಲು ಆರೋಪ

 

 

ಇದನ್ನೂ ಓದಿ: ಟಿಪ್ಪು ಜಯಂತಿ ವಿವಾದ: ಸಿ.ಟಿ ರವಿ ಮತ್ತು ಅನಂತ್‌ಕುಮಾರ್ ಹೆಗಡೆ ವಿರುದ್ಧ ದೂರು ಪರಿಗಣಿಸಲು ಹೈಕೋರ್ಟ್‌ ಸೂಚನೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights