ಕಾಂಗ್ರೆಸ್ ಡಿಎನ್‌ಎಯಲ್ಲಿ ‘ಲೂಟಿ’ ಇದೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರದ ಆಸ್ತಿ ಹಣಗಳಿಕೆಯ ಪೈಪ್‌ಲೈನ್‌ ಯೋಜನೆಯ ವಿರುದ್ದ ಕಾಂಗ್ರೆಸ್‌ ಅಸಾಮಾಧಾನವನ್ನು ವ್ಯಕ್ತಪಡಿಸಿದ್ದು, ಬಿಜೆಪಿಯು ದೇಶದ ಸಾರ್ವಜನಿಕ ಆಸ್ತಿಯನ್ನು ಮಾರಾಟ ಮಾಡುತ್ತಿದೆ ಎಂದು ಹೇಳಿದೆ. ಕಾಂಗ್ರೆಸ್‌ ಟೀಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್‌ ಪಕ್ಷದ ಡಿಎನ್ಎಯಲ್ಲಿಯೇ “ಲೂಟಿ” ಇದೆ ಎಂದು ಹೇಳಿದ್ದಾರೆ.

“ಲೂಟಿಯು ಕಾಂಗ್ರೆಸ್‌ನ ಮನಸ್ಸಿನಿಂದ ಹೊರಹೋಗುವುದಿಲ್ಲ. ಅವರ ಆಳ್ವಿಕೆಯಲ್ಲಿ ಲೂಟಿ ಹೇಗೆ ಹರಡಿಕೊಂಡಿತ್ತು- ಸ್ಪೆಕ್ಟ್ರಮ್, ಗಣಿ, ನೀರು ಮತ್ತು ಎಲ್ಲಾ ವಲಯದಲ್ಲೂ” ಎಂದು ಸೀತಾರಾಮನ್ ತನ್ನ ಛತ್ತೀಸ್‌ಗಢ ರಾಜಧಾನಿ ರಾಯ್ಪುರದಲ್ಲಿ ಹೇಳಿದ್ದಾರೆ.

ಈ ವರ್ಷ ಆಗಸ್ಟ್‌ನಲ್ಲಿ ರಾಷ್ಟ್ರೀಯ ಹಣಗಳಿಕೆಯ ಪೈಪ್‌ಲೈನ್ (National Monetisation Pipeline) ಅನ್ನು ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. ಇದು ಖಾಸಗಿ ಕಂಪನಿಗಳನ್ನು ಮೂಲಸೌಕರ್ಯ ವಲಯಗಳಲ್ಲಿ ಒಳಗೊಳ್ಳಲು ಅವಕಾಶ ನೀಡಿದೆ – ಪ್ಯಾಸೆಂಜರ್ ರೈಲುಗಳು, ರೈಲ್ವೇ ನಿಲ್ದಾಣಗಳು, ವಿಮಾನ ನಿಲ್ದಾಣಗಳು, ರಸ್ತೆಗಳು ಮತ್ತು ಕ್ರೀಡಾಂಗಣಗಳವರೆಗೆ ಎಲ್ಲಾ ಕ್ಷೇತ್ರದಲ್ಲಿಯೂ ಖಾಸಗಿ ಕಂಪನಿಗಳಿಗೆ ಅವಕಾಶ ನೀಡಲಿದೆ.

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದೆ. ಅಲ್ಲಿನ ಕಾಂಗ್ರೆಸ್‌ನಲ್ಲಿ ಬಂಡಾಯದ ಕಾವು ಇದ್ದಿದ್ದು, ನಾಯಕತ್ವ ಬದಲಾವಣೆಗೆ ಒತ್ತಾಯ ಇದೆ. ಈ ಬಗ್ಗೆ ಮಾತನಾಡಿದ ಸೀತಾರಾಮನ್, ಜನರಿಗೆ ಸೇವೆ ಮಾಡವ ಹೊರತಾಗಿಯೂ, ಕಾಂಗ್ರೆಸ್ ನಾಯಕ ಕೇವಲ ಅಧಿಕಾರದಲ್ಲಿ ಉಳಿಯುವತ್ತ ಗಮನ ಹರಿಸಿದ್ದಾರೆ ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಜನರ ಆಶೀರ್ವಾದದಿಂದ ಪಡೆಯುವ ಬಹುಮತವನ್ನು ನಿಭಾಯಿಸಲು ಸಾಧ್ಯವಿಲ್ಲ. ವಿಪರ್ಯಾಸವೆಂದರೆ ಅವರ ಶಾಸಕರು ದೆಹಲಿಗೆ ಭೇಟಿ ನೀಡುತ್ತಿದ್ದಾರೆ ಮತ್ತು ಮುಖ್ಯಮಂತ್ರಿಗಳು ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳುತ್ತಿದ್ದಾರೆ” ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಮಂಗಳವಾರ ಇಂಧನ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳು ಅಂತರಾಷ್ಟ್ರೀಯ ತೈಲ ದರಗಳ ಮೇಲೆ ಅವಲಂಬಿತವಾಗಿವೆ ಎಂದು ಸೀತಾರಾಮನ್ ಹೇಳಿದ್ದಾರೆ.

“ಭಾರತವು ತನಗೆ ಅಗಶ್ಯವಿರುವ ಪೆಟ್ರೋಲ್ ಮತ್ತು ಡೀಸೆಲ್‌ನ ಶೇ.99 ರಷ್ಟು ಭಾಗವನ್ನು ಆಮದು ಮಾಡಿಕೊಳ್ಳಬೇಕಾಗಿತ್ತು. ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಹೆಚ್ಚುತ್ತಿರುವ ವೆಚ್ಚದ ಸಮಸ್ಯೆಯನ್ನು ನಿಭಾಯಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ. ಅಲ್ಲದೆ, ಏರುತ್ತಿರುವ ಇಂಧನ ಬೆಲೆಗಳು ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆ ಹೆಚ್ಚಿಸಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಮಾಜಿ ಕಾಂಗ್ರೆಸ್‌ ನಾಯಕಿ ಬಿಜೆಪಿ ಸೇರಿದ್ದಕ್ಕೆ ವಿರೋಧ; ರಾಜೀನಾಮೆಗೆ ಮುಂದಾದ ಹಲವು ಬಿಜೆಪಿ ಕಾರ್ಯಕರ್ತರು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights