ಅಮೆಜಾನ್ ಕಂಪನಿಯ ಲಾರಿ ಅಪಹರಣ; 1.5 ಕೋಟಿ ರೂ. ಮೌಲ್ಯದ ವಸ್ತುಗಳು ದರೋಡೆ!

ಅಮೆಜಾನ್ ಕಂಪನಿಗೆ ಸೇರಿದ ಕಂಟೇನರ್ ಲಾರಿಯೊಂದನ್ನು ಅಪಹರಿಸಿರುವ ದುಷ್ಕರ್ಮಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನಗೊಂಡನಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ದೇವನಹಳ್ಳಿ ಮಾರ್ಗವಾಗಿ ಹೊಸಕೋಟೆ ತಾಲೂಕಿನ ಅನಗೊಂಡನಹಳ್ಳಿ ಬಳಿಯ ಫ್ಯಾಕ್ಟರಿಗೆ ತೆರಳುತ್ತಿದ್ದ ಕಂಟೇನರ್ ಲಾರಿಯ ಜಿಪಿಎಸ್ ಕಿತ್ತು ಬಿಸಾಕಿದ್ದು, ಬಳಿಕ ಲಾರಿ ಅಪಹರಿಸಿದ್ದು, ಅದರಲ್ಲಿದ್ದ ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳು, ಗೃಹೋಪಯೋಗಿ ವಸ್ತುಗಳು ಸೇರಿ ಸುಮಾರು ಒಂದುವರೆ ಕೋಟಿ ಮೌಲ್ಯದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.

ಕಂಟೇನರ್ ಲಾರಿಯನ್ನು ನಾಗಲಾಪುರ ಗೇಟ್ ಬಳಿ ಬಿಟ್ಟು ಖದೀಮರು ಪರಾರಿಯಾಗಿದ್ದಾರೆ. ಲಾರಿ ಚಾಲಕ ಕೂಡ ನಾಪತ್ತೆಯಾಗಿದ್ದಾನೆ. ಸ್ಥಳಕ್ಕೆ ಎಸ್ ಪಿ ಕಿಶೋರ್ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights