ಮಹಾತ್ಮ ಗಾಂಧಿ ಕಾಶಿ ವಿದ್ಯಾಪೀಠ ಚುನಾವಣೆ: NSUIಗೆ ಗೆಲುವು; ABVPಗೆ ಹೀನಾಯ ಸೋಲು!

ಉತ್ತರ ಪ್ರದೇಶದ ಲಖನೌದಲ್ಲಿರುವ ಮಹಾತ್ಮ ಗಾಂಧಿ ಕಾಶಿ ವಿದ್ಯಾಪೀಠ (ವಿಶ್ವವಿದ್ಯಾನಿಲಯ)ದ ಕ್ಯಾಂಪಸ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ವಿದ್ಯಾರ್ಥಿ ಸಂಘಟನೆಯಾದ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಸಂಘ (ಎನ್‌ಎಸ್‌ಯುಐ) ಎರಡು ಪ್ರಮುಖ ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಿಜೆಪಿಯ ವಿದ್ಯಾರ್ಥಿ ಸಂಘ ಎಬಿವಿಪಿ ಯಾವುದೇ ಪ್ರಮುಖ ಸ್ಥಾನಗಳನ್ನು ಪಡೆದುಕೊಳ್ಳದೆ ಹೀನಾಯ ಸೋಲನುಭವಿಸಿದೆ.

ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನವನ್ನು ಸಮಾಜವಾದಿ ಪಕ್ಷದ ವಿದ್ಯಾರ್ಥಿ ಘಟಕವಾದ ಸಮಾಜವಾದಿ ಛಾತ್ರ ಸಭಾದ ಅಭ್ಯರ್ಥಿ ಗೆದ್ದುಕೊಂಡಿದ್ದಾರೆ. NSUIನ ಅಭ್ಯರ್ಥಿಗಳು ಉಪಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಸ್ಥಾನಗಳನ್ನು ಗೆದ್ದಿದ್ದಾರೆ.

ಅಧ್ಯಕ್ಷ ಸ್ಥಾನವನ್ನು ವಿಮಲೇಶ್ ಯಾದವ್ ಗೆದ್ದರೆ, ಸಂದೀಪ್ ಪಾಲ್ ಉಪಾಧ್ಯಕ್ಷರಾಗಿ ಮತ್ತು ಪ್ರಫುಲ್ಲಾ ಪಾಂಡೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯ ರಾಜಧಾನಿಯಲ್ಲಿರುವ ವಿಶ್ವವಿದ್ಯಾನಿಲಯದಲ್ಲಿ ಎಬಿವಿಪಿ ಗೆಲುವು ಸಾಧಿಸಲು ವಿಫಲವಾಗಿದ್ದು, ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ NSUI ಎರಡು ಸ್ಥಾನಗಳನ್ನು ಗೆದ್ದುಕೊಂಡಿದೆ.

“ವಿದ್ಯಾರ್ಥಿಗಳು ಎಬಿವಿಪಿ ಗೂಂಡಾಗಿರಿಯನ್ನು ಧಿಕ್ಕರಿಸುವ ಮೂಲಕ ಎನ್‌ಎಸ್‌ಯುಐ ಅನ್ನು ಬೆಂಬಲಿಸಿದ್ದಾರೆ. ಮುಂದಿನ ದಿನಗಳಲ್ಲಿ ನಾವು ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತೇವೆ ”ಎಂದು NSUIನ ಅಖಿಲೇಶ್ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣೆಗೂ ಮುನ್ನ ಕಾಂಗ್ರೆಸ್‌ ಸರ್ಕಾರ ಪತನ; ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights