ಗುಂಪುಗಳ ಮಾರಾಮಾರಿ: RSS ಕಾರ್ಯಕರ್ತನ ಹತ್ಯೆ; 08 ಮಂದಿ SDPI ಕಾರ್ಯಕರ್ತರ ಬಂಧನ!

ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದು, ಘಟನೆಗೆ ಸಂಬಂಧಿಸಿದಂತೆ ಎಸ್‌ಡಿಪಿಐನ ಎಂಟು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಬುಧವಾರ ರಾತ್ರಿ ಅಲಪ್ಪುಳ ಬಳಿಯ ವಲಯಾರ್‌ ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಮತ್ತು ಎಸ್‌ಡಿಪಿಐ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ ಆರ್‌ಎಸ್‌ಎಸ್‌ ಕಾರ್ಯಕರ್ತನಿಗೆ ಹರಿತವಾದ ಚಾಕುವಿನಿಂದ ಇರಿಯಲಾಗಿದ್ದು, ಆತ ಸಾವನ್ನಪ್ಪಿದ್ದಾನೆ ಎಂದು ವರದಿಗಳು ತಿಳಿಸಿವೆ.

ಮೃತಪಟ್ಟವನನ್ನು ನಂದು ಎಂದು ಗುರುತಿಸಲಾಗಿದೆ. ಆತನಿಗೆ ಇರಿದ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ದಾರಿ ಮಧ್ಯೆ ಆತ ಸಾವನ್ನಪ್ಪಿದ್ದಾನೆ.

ಘಟನೆಯಲ್ಲಿ ಎರಡೂ ಗುಂಪಿನವರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ. ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ, ಅಲಪ್ಪುಳ ಜಿಲ್ಲಾ ಬಂದ್‌ಗೆ ಬಿಜೆಪಿ ಕರೆ ಕೊಟ್ಟಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಸ್‌ಡಿಪಿಐನ 08 ಮಂದಿನ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: BJP ಸದಸ್ಯರ ಅಡ್ಡ ಮತದಾನ; NCP ಪಾಲಿಗೆ ಮೇಯರ್‌ ಹುದ್ದೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights