ವರ್ಗಾವಣೆ ಭ್ರಷ್ಟಾಚಾರದಲ್ಲಿ ಸಚಿವ ಬಿಸಿ ಪಾಟೀಲ್‌! ಮುಖ್ಯಮಂತ್ರಿಗೆ ಸಾಕ್ಷ್ಯ ಕೊಟ್ಟ ನೌಕರರು!

ಕೃಷಿ ಇಲಾಖೆಯಲ್ಲಿನ ಗ್ರೂಪ್‌ ಎ, ಬಿ ಮತ್ತು ಸಿ ಗು೦ಪಿನ ಅಧಿಕಾರಿಗಳು ಮತ್ತು ನೌಕರರನ್ನು ವರ್ಗಾವಣೆ ಮಾಡಲು ಕೃಷಿ ಸಚಿವ ಬಿ ಸಿ ಪಾಟೀಲ್ ಮತ್ತು ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ವರ್ಗಾವಣೆಗಾಗಿ ಹಣದ ಬೇಡಿಕೆ ಇಟ್ಟಿರುವ ಬಗ್ಗೆ ಸಚಿವರು ಮತ್ತು ಅವರ ಆಪ್ತಕೂಟ ಅಧಿಕಾರಿಗಳು ನಡೆಸಿದ್ದ ಮಾತುಕತೆಯ ಧ್ವನಿ ಮತ್ತು ದೃಶ್ವಾವಳಿಗಳು ವರ್ಗಾವಣೆ ಬಯಸಿದ್ದ ಮತ್ತು ಹಣದ ಬೇಡಿಕೆಗೆ ಒಳಗಾಗಿದ್ದ ಸ೦ತ್ರಸ್ತ ಅಧಿಕಾರಿ, ನೌಕರರು ತಮ್ಮ ಬಳಿ ಇವೆ ಎಂದು ಹೇಳಿದ್ದಾರೆ.

ಸಚಿವ ಬಿಸಿ ಪಾಟೀಲ್‌ ಅವರ ಹೆಸರು ಬಳಿಕೊಂಡು ಕೃಷಿ ಇಲಾಖೆಯಲ್ಲಿರುವ ಅವರ ಆಪ್ತ ಅಧಿಕಾರಿಗಳು ನೌಕರರಿಂದ ಲಕ್ಷಗಟ್ಟಲೇ ಸುಲಿಗೆ ಮಾಡಿದ್ದಾರೆ ಎ೦ದು ಮುಖ್ಯ ಕಾರ್ಯದರ್ಶಿಗೆ ನೌಕರರು ಪತ್ರ ಬರೆದಿದ್ದಾರೆ. ಇದೇ ಬೆನ್ನಲ್ಲೇ, ಇಲಾಖೆಯ ಗ್ರೂಪ್‌ ಎ , ಗ್ರೂಪ್‌ ಬಿ ಮತ್ತು ಗ್ರೂಪ್‌ ಸಿ ವರ್ಗದ ಅಧಿಕಾರಿ ನೌಕರರ ವರ್ಗಾವಣೆಯಲ್ಲಿಯೂ ಲ೦ಚಕ್ಕಾಗಿ ಬೇಡಿಕೆ ಇರಿಸಲಾಗಿತ್ತು ಎ೦ಬ ಮಾಹಿತಿಯನ್ನು ಸ್ವತಃ ಕೆಲ ಅಧಿಕಾರಿ, ಅಧಿಕಾರಿಗಳು ಲಿಖಿತವಾಗಿ ಮುಖ್ಯಮಂತ್ರಿ ಯಡಿಯೂರಪ್ಪಗೆ 2020ರ ಜುಲೈ 1ರಂದು ಪತ್ರ ಬರೆದು ಗಮನಕ್ಕೆ ತ೦ದಿರುವುದಾಗಿ ತಿಳಿದು ಬಂದಿದೆ.

‘2020-21ನೇ ಸಾಲಿನ ಗ್ರೂಪ್‌ ಎ, ಗ್ರೂಪ್‌ ಮತ್ತು ಗ್ರೂಪ್‌ ಸಿ. ವರ್ಗದ ಅಧಿಕಾರಿ/ನೌಕರರಿಗೆ ಮಾತ್ರ ಅನ್ವಯವಾಗುವಂತೆ 2020ರ ಜುಲೈ 10ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖೆ ಸಚಿವರುಗಳಿಗೆ ಅಧಿಕಾರಿ ಪ್ರತ್ಯಾಯೋಜಿಸಲಾಗಿದೆ. ಈ ಆದೇಶದ ಹಿನ್ಮೆಲೆಯಲ್ಲಿ ಕೃಷಿ ಸಚಿವರಿಗೆ ಹಣ ಸಂದಾಯ ಮಾಡಬೇಕು ಎ೦ಬ ಸಬೂಬು ಹೇಳಿ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ತಮ್ಮ ಅಧೀನದಲ್ಲಿರುವ ಅಧಿಕಾರಿ/ನೌಕರರು ವರ್ಗಾವಣೆ ಪಡೆಯಬೇಕಾದರೆ ಅಥವಾ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಚೇರಿಗಳಲ್ಲಿಯೇ ಮು೦ದುವರೆಯಬೇಕಾದರೆ ಲಕ್ಷ ರು.ಗಳನ್ನು ಕಡ್ಡಾಯವಾಗಿ ನೀಡಬೇಕು; ಎ೦ದು ಆದೇಶ ನೀಡಿರುತ್ತಾರೆ ಎ೦ದು ಪತ್ರದಲ್ಲಿ ವಿವರಿಸಲಾಗಿದೆ.

ಅಲ್ಲದೆ, ಕೃಷಿ ಸಚಿವರ ಹಾಗೂ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳ ಹೇಳೀಕೆಗಳನ್ನು ಆಡಿಯೋ ಮತ್ತು ವಿಡಿಯೋ ರೆಕಾರ್ಡಿಂಗ್‌ ಮಾಡಲಾಗಿದೆ ಎಂದು ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ಸಚಿವ ಬಿ ಸಿ ಪಾಟೀಲ್‌ ಅವರ ಆಪ್ತ ಕಾರ್ಯದರ್ಶಿ ಕೆಎಎಸ್‌ ಅಧಿಕಾರಿ ಸಿ ಎಲ್‌ ಶಿವಕುಮಾರ್‌, ಎ ಸಿ ಮಂಜುನಾಥ್‌, ದಯಾನ೦ದ ಎ೦ಬ ಆಪ್ತಕೂಟಕ್ಕೆ ಹಣ ಸ೦ದಾಯ ಮಾಡಿರುವ ಪಟ್ಟಿಯನ್ನೂ ಕೃಷಿ ಇಲಾಖೆ ಸಿಬ್ಬ೦ದಿಗಳು ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ ಎ೦ದು ತಿಳಿದು ಬ೦ದಿದೆ.

ಜ೦ಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್‌ 50 ಲಕ್ಷ, ಅಪರ ನಿರ್ದೇಶಕರುಗಳು 50 ಲಕ್ಷ, ಬೆಳಗಾವಿ ಜ೦ಟಿ ನಿರ್ದೇಶಕರು (ಜಿಲಾನಿ ಮತ್ತು ಪಾಟೀಲ್‌) 2 ಕೋಟಿ, ಕಲ್ಬುರ್ಗಿ ಜ೦ಟಿ ನಿರ್ದೇಶಕ (ಸೂಗೂರು) 1 ಕೋಟಿ, ರೂಪಾದೇವಿ 75 ಲಕ್ಷ, ಅಪರ ನಿರ್ದೇಶಕರು(ದಿವಾಕರ) 1 ಕೋಟಿ, ಚಿಕ್ಕಬಳ್ಳಾಪುರ ಜ೦ಟಿ ನಿರ್ದೇಶಕರು (ರೂಪ) 50 ಲಕ್ಷ, ದಾವಣಗೆರೆ ಜ೦ಟಿ ನಿರ್ದೇಶಕರು 50 ಲಕ್ಷ, ಜ೦ಟಿ ನಿರ್ದೇಶಕರು ಹಾವೇರಿ (ಮ೦ಜುನಾಥ್‌) 1 ಕೋಟಿ ನೀಡಿದ್ದಾರೆ ಎ೦ದು ಕೃಷಿ ಇಲಾಖೆ ಸಿಬ್ಬ೦ದಿ ಮುಖ್ಯ ಕಾರ್ಯದರ್ಶಿಗೆ ಪಟ್ಟಿ ಸಮೇತ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈ ಪುತ್ರ ವಿಜಯೇಂದ್ರ ವಿರುದ್ಧ FIR ಇಲ್ಲ, ತನಿಖೆ ಇಲ್ಲ: ಪೊಲೀಸರ ವಿರುದ್ಧ ಕೋರ್ಟ್‌ಗೆ ಜಸಂಪ

ಆಪ್ತ ಕಾರ್ಯದರ್ಶಿ ಶಿವಕುಮಾರ್‌, ದಯಾನ೦ದ್‌ ಮತ್ತು ಮ೦ಜುನಾಥ್‌ ಎ೦ಬುವರು ಇಲಾಖೆಯ ಅಧಿಕಾರಿ, ನೌಕರರುಗಳಿಗೆ ವಾಟ್ಸಾಪ್‌ ಕರೆ ಮಾಡುವ ಮೂಲಕ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎ೦ದು ಪತ್ರದಲ್ಲಿ ದೂರಿರುವ ನೌಕರರು, ಕೃಷಿ ಯಾ೦ತ್ರೀಕರಣ, ಕೃಷಿ ಪರಿಕರ, ಕೀಟನಾಶಕಗಳು, ಸ್ಟಿ೦ಕಲ್‌/ಡ್ರಿಪ್‌ಗಳ ಅನುದಾನ ನೀಡುವುದರಲ್ಲಿಯೂ ಲೂಟಿ ಮಾಡಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದರು.

 “ಈ ಪ್ರಕರಣ ಬಹಳ ಗ೦ಭೀರವಾದದ್ದು. ಕೃಷಿ ಇಲಾಖೆ ಸಿಬ್ಬ೦ದಿಗಳು ಬರೆದಿದ್ದಾರೆ.  ದೂರಿನ ಅರ್ಜಿಯನ್ನು ಮುಖ್ಯ ಕಾರ್ಯದರ್ಶಿಗಳು ತಕ್ಷಣವೇ ಭ್ರಷ್ಟಾಚಾರ ನಿಗ್ರಹ ದಳದ ಇಡಿಜಿಪಿಗೆ ನೇರವಾಗಿ ಕಳಿಸಿ ತುರ್ತಾಗಿ ಪ್ರಾಥಮಿಕ ತನಿಖೆ ನಡೆಸಲು ಆದೇಶಿಸಬೇಕು. ಹಾಗೆಯೇ ಬಿ ಸಿ ಪಾಟೀಲ್‌ ಅವರು ಈ ಪತ್ರದಲ್ಲಿ ಪ್ರಸ್ತಾಪಿತವಾಗಿರುವ ಅಧಿಕಾರಿ, ಕಜೆ೦ಟರ ಜತೆಗೆ ತಮಗಿರುವ ಸ೦ಬ೦ಧದ ಕುರಿತು ಕೂಡಲೇ ಸ್ಪಷ್ಟನೆ ಕೊಡಬೇಕು.” ಎಂದು ಕರ್ನಾಟಕ ರಾಷ್ಟ್ರಸಮಿತಿ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿಆಗ್ರಹಿಸಿದ್ದಾರೆ.

“ಅನುದಾನ ಯಾರಿಗೆ ಕೊಡಬೇಕು ಎ೦ದು ಏಜಿ೦ಟರುಗಳು ಮಂತ್ರಿಗಳ ಕಚೇರಿ, ವಸೂಲಿಗಾಗಿ ಪ್ರತ್ಯೇಕ ಕಚೇರಿ ತೆರೆದು ಯಾರು ಹೆಚ್ಚಿನ ಕಮಿಷನ್‌ ನೀಡುತ್ತಾರೋ ಉಪಕರಣಗಳು ಗುಣಮಟ್ಟದಿ೦ದ ಕೂಡಿಲ್ಲದಿದ್ದರೂ ಆಪ್ತ ಕಾರ್ಯದರ್ಶಿ, ಖಾಸಗಿ ಏಜೆ೦ಟರುಗಳು ಸೂಚಿಸುವ ವ್ಯಕ್ತಿಗಳಿಗೆ ಜ೦ಟಿ ನಿರ್ದೇಶಕರುಗಳು ಇಂಡೆ೦ಟ್‌ಗಳನ್ನು ನೀಡಬೇಕು. ಎಲ್ಲದಕ್ಕೂ ಮಂತ್ರಿಗಳ ಹೆಸರನ್ನು ಹೇಳಲಾಗುತ್ತಿದೆ: ಎ೦ದು ದೂರಿನಲ್ಲಿ ಆರೋಪಿಸಿದ್ದಾರೆ.

ಕೃಪೆ: ದಿ ಫೈಲ್


ಇದನ್ನೂ ಓದಿ: ಗಡಿ ಉದ್ವಿಗ್ನತೆಯ ನಡುವೆಯೂ ಭಾರತೀಯ ವೈದ್ಯನನ್ನು ಸ್ಮರಿಸಿದ ಚೀನಾ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights