ಮುಝಫರ್‌ನಗರ ಕೋಮುಗಲಭೆ ಪ್ರಕರಣ: ಬಿಜೆಪಿ ಶಾಸಕ ಸೇರಿ 12 ಮಂದಿ ಖುಲಾಸೆ!

2013ರಲ್ಲಿ ನಡೆದಿದ್ದ ಮುಝಫರ್‌ನಗರ ಕೋಮುಗಲಭೆ ಪ್ರಕರಣದಲ್ಲಿ ಬಿಜೆಪಿ ಶಾಸಕ ವಿಕ್ರಮ್ ಸೈನಿ ಮತ್ತು ಇತರ 11 ಮಂದಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಆಗಸ್ಟ್ 2013ರಂದು ಕವಾಲ್ ಗ್ರಾಮದಲ್ಲಿ ಸೋದರ ಸಂಬಂಧಿಗಳಾದ ಸಚಿನ್ ಮತ್ತು ಗೌರವ್ ಎಂಬುವವರ ಹತ್ಯೆಯ ನಂತರ ಹಿಂಸಾಚಾರ ನಡೆದಿತ್ತು. ಹಿಂಸಾಚಾರದಲ್ಲಿ ಶಾಸಕ ಸೈನಿ ಮತ್ತು ಇತರರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು.

ಘಟನೆ ನಡೆದ ಸಂದರ್ಭದಲ್ಲಿ ಖತೌಲಿಯ ಶಾಸಕ ಸೈನಿ ಅವರು ಗ್ರಾಮದ ಪ್ರಧಾನರಾಗಿದ್ದರು.

ಪ್ರಕರಣದ ವಿಚಾರಣೆ ನಡೆಸಿರುವ ಮುಝಫ್ಫರ್‌ ನಗರ ನ್ಯಾಯಾಲಯದ ವಿಶೇಷ ನ್ಯಾಯಮೂರ್ತಿ ಗೋಪಾಲ್ ಉಪಾಧ್ಯಾಯ ಅವರು, ವಿಕ್ರಮ್ ಸೈನಿ ಮತ್ತು ಇತರ 11 ಮಂದಿ ವಿರುದ್ದ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಹೇಳಿದ್ದು, ಅವರೆಲ್ಲರನ್ನೂ ಖುಲಾಸೆಗೊಳಿಸಿದ್ದಾರೆ.

ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಸರ್ಕಾರಿ ವಕೀಲ ನರೇಂದ್ರ ಶರ್ಮಾ, “ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಸಾಕ್ಷಿಗಳು ಪ್ರಾಸಿಕ್ಯೂಷನ್‌ ಅನ್ನು ಬೆಂಬಲಿಸಲಿಲ್ಲ” ಎಂದು ಹೇಳಿದ್ದಾರೆ.

ಜಾಮೀನಿನ ಮೇಲೆ ಹೊರಗಿದ್ದ ಸೈನಿ ಮತ್ತು ಇತರ ಆರೋಪಿಗಳು ಶುಕ್ರವಾರ ನ್ಯಾಯಾಲಯದಲ್ಲಿ ಹಾಜರಾಗಿದ್ದರು.

ಇದನ್ನೂ ಓದಿ: ಬಿಹಾರ: ಕನ್ಹಯ್ಯಾ, ಜಿಗ್ನೇಶ್, ಹಾರ್ದಿಕ್ ಮೇಲೆ ಕಾಂಗ್ರೆಸ್‌ಗೆ ಬಲವಾದ ನಂಬಿಕೆ; ಆರ್‌ಜೆಡಿ ಜೊತೆ ಮೈತ್ರಿ ಕಟ್!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights