ಮೋದಿಯ ವಿಶ್ವಾಸಿ, ಐಎಎಸ್ ಅಧಿಕಾರಿ ಸ್ವಯಂ ನಿವೃತ್ತಿ ಪಡೆದು BJPಗೆ ಸೇರ್ಪಡೆ!

ಎಂಎಸ್‌ಎಂಇ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ, ಪಿಎಂ ನರೇಂದ್ರ ಮೋದಿಯವರ ವಿಶ್ವಾಸ ಗಳಿಸಿದ್ದ ಅಧಿಕಾರಿ ಎ.ಕೆ.ಶರ್ಮಾ ಅವರು ಸ್ವಯಂ ನಿವೃತ್ತಿ ಪಡೆದಿದ್ದು, ಗುರುವಾರ ಉತ್ತರ ಪ್ರದೇಶದ ಲಖನೌದಲ್ಲಿ ಬಿಜೆಪಿಗೆ ಸೇರಲಿದ್ದಾರೆ.

1988 ರ ಬ್ಯಾಚ್ ಐಎಎಸ್ ಅಧಿಕಾರಿ ಸೋಮವಾರ ರಾಜೀನಾಮೆ ನೀಡಿದ್ದು, ಉತ್ತರ ಪ್ರದೇಶ ರಾಜ್ಯದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪಥಿಧಸಬಹುದು ಎಂದು ಹೇಳಲಾಗುತ್ತಿದೆ.

ಶರ್ಮಾ ಸಮಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುವಲ್ಲಿ ಮತ್ತು ಯಶಸ್ವಿಯಾಗುವಲ್ಲಿ ಹೆಸರುವಾಸಿಯಾಗಿದ್ದಾರೆ. ಅವರು ಗುಜರಾತ್‌ನ ಸಿಎಮ್‌ಒನಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುವಾಗ ಮೋದಿಯವರ ನಂಬಿಕೆಯನ್ನು ಗಳಿಸಿದ್ದರು. ಅಲ್ಲದೆ, ರಾಜ್ಯಕ್ಕೆ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸಲು ವೈಬ್ರಂಟ್ ಗುಜರಾತ್ ಅಭಿಯಾನವನ್ನು ನಿರ್ವಹಿಸಿದ್ದರು ಎಂದು ಹೇಳಲಾಗಿದೆ.

ಅವರು ಆರು ವರ್ಷಗಳ ಕಾಲ ಪಿಎಂಒನಲ್ಲಿ ಸೇವೆ ಸಲ್ಲಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights