NEET exam: ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ನ್ಯಾಯಧೀಶರ ಒತ್ತಾಯ

ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸುವ ನೀಟ್ ಪರೀಕ್ಷೆಯ ವಿಚಾರದಲ್ಲಿ ನ್ಯಾಯಾಲಯದ ಆದೇಶದ ಬೇಸರ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದ, ನಟ ಸೂರ್ಯ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರು ಒತ್ತಾಯಿಸಿದ್ದಾರೆ.

ನಿನ್ನೆ(ಭಾನುವಾರ) ನೀಟ್‌ ಪರೀಕ್ಷೆ ನಡೆದಿದ್ದು, ಪರೀಕ್ಷೆಗೂ ಮುನ್ನ ತಮಿಳುನಾಡಿನಲ್ಲಿ ಕೊರೊನಾ ಹಾಗೂ ಇನ್ನಿತರೆ ವಿಚಾರಗಳಿಂದ ಭಯಗೊಂಡು ಐದು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದ ನಟ ಸೂರ್ಯ, ತಮಿಳು ನಾಡಿನಲ್ಲಿ ಮೂವರು ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ‘ಕೊರೊನಾ ವೈರಸ್‌ನಿಂದಾಗಿ ತಮ್ಮ ಜೀವಕ್ಕೆ ಹೆದರಿ, ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ನ್ಯಾಯವನ್ನು ನೀಡುವ ನ್ಯಾಯಾಲಯ, ವಿದ್ಯಾರ್ಥಿಗಳನ್ನು ಮಾತ್ರ ನಿರ್ಭಯವಾಗಿ ಹೋಗಿ ಪರೀಕ್ಷೆಗಳನ್ನು ಬರೆಯುವಂತೆ ಆದೇಶಿಸುತ್ತದೆ’ ಎಂದು ಬರೆದು ಟ್ವೀಟ್‌ ಮಾಡಿದ್ದರು.

ಅವರ ಟ್ವೀಟ್‌ ಕುರಿತು ಮದ್ರಾಸ್‌ ಹೈಕೋರ್ಟ್‌ನ ನಾಯಾಧೀಶರಾದ ಎಸ್.ಎಂ. ಸುಬ್ರಮಣಿಯಂ ಅವರು ಮುಖ್ಯ ನ್ಯಾಯಮೂರ್ತಿ ಅಮರೇಶ್ವರ ಪ್ರತಾಪ್ ಸಾಹಿಗೆ ಪತ್ರ ಬರೆದಿದ್ದು, ನಟ ಸೂರ್ಯ ಅವರು ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಗಾಂಭೀರ್ಯತೆಯನ್ನು ಪ್ರಶ್ನಿಸುವ ರೀತಿಯಲ್ಲಿ ಕೀಳುಮಟ್ಟದ ಟೀಕೆಗಳನ್ನು ಮಾಡಿದ್ದಾರೆ. ಹೀಗಾಗಿ ನ್ಯಾಯಾಂಗ ನಿಂದನೆ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸೂರ್ಯ ಅವರ ಹೇಳಿಕೆಯು ನ್ಯಾಯಾಲಯದ ತಿರಸ್ಕಾರಕ್ಕೆ ಸಮನಾಗಿದೆ. ಈ ದೇಶದ ನ್ಯಾಯಾಂಗ ವ್ಯವಸ್ಥೆ ಮತ್ತು ನ್ಯಾಯಾಧೀಶರ ಮೇಲೆ ನಂಬಿಕೆ, ಗೌರವ ಅವರಿಗಿಲ್ಲ ಎಂಬುದನ್ನು ತೋರಿಸುತ್ತದೆ. ಇದರಿಂದ ಸಾರ್ವಜನಿಕರಿಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ, ವಿಶ್ವಾಸ, ಗೌರವ ಹೊರಟುಹೋಗುತ್ತದೆ ಎಂದು ಎಸ್.ಎಂ. ಸುಬ್ರಮಣಿಯಂ ಹೇಳಿದ್ದಾರೆ.


ಇದನ್ನೂ ಓದಿ: ನವಿಲುಗಳೊಂದಿಗೆ ಬ್ಯುಸಿಯಿರುವ ಅಹಂಕಾರಿ ವ್ಯಕ್ತಿ ಹೇರಿದ ಲಾಕ್‌ಡೌನ್‌ ಕೊರೊನಾ ಹರಡಲು ಕಾರಣ: ರಾಹುಲ್‌ಗಾಂಧಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights