ಸಿಲಿಕಾನ್ ಸಿಟಿಯಲ್ಲಿ 21,199 ಹೊಸ ಕೊರೊನಾ ಕೇಸ್ : 64 ಜನ ಬಲಿ!
ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ 37, 733 ಜನರಿಗೆ ಸೋಂಕು ತಗುಲಿದೆ. ಒಟ್ಟು 217 ಜನರು ಸೋಂಕಿಗೆ ಬಲಿಯಾಗಿದ್ದಾರೆ.
ನಿನ್ನೆಗಿಂತಲೂ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಬೆಂಗಳೂರಿನಲ್ಲಿ ಎಂದಿನಂತೆ ಸೋಂಕಿತರ ಸಂಖ್ಯೆ ಗಣನೀಯವಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಾರ, ಇಂದು ಸಿಲಿಕಾನ್ ಸಿಟಿಯಲ್ಲಿ 21,199 ಮಂದಿಗೆ ಸೋಂಕು ತಗುಲಿದ್ದು 64 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಹೊಸ 37,733 ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16,10,865ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 217 ಮಂದಿಗೆ ಸೋಂಕು ತಗುಲಿದ್ದು ಇದರೊಂದಿಗೆ ಸಾವಿನ ಸಂಖ್ಯೆ 16,011ಕ್ಕೆ ಏರಿಕೆಯಾಗಿದೆ.
21,149 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಈವರೆಗೆ 11,64,398ಕ್ಕೆ ಏರಿಕೆಯಾಗಿದೆ. 4,21,436 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.
ಇಂದಿನ 02/05/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿhttps://t.co/Lxa3a9QCCf @CMofKarnataka @BSYBJP @mla_sudhakar @drashwathcn @RAshokaBJP @BSBommai @CPBlr @PIBBengaluru @KarnatakaVarthe @PIBBengaluru @BBMPCOMM @BlrCityPolice @blrcitytraffic pic.twitter.com/xBSEkX7ztu
— K'taka Health Dept (@DHFWKA) May 2, 2021