ಮೋದಿ ಅಮೆರಿಕಾ ಭೇಟಿ ವಿರುದ್ದ ವೈಟ್‌ಹೌಸ್‌ ಎದುರು ಅನಿವಾಸಿ ಭಾರತೀಯರ ಪ್ರತಿಭಟನೆ!

ಪ್ರಧಾನಿ ನರೇಂದ್ರ ಮೋದಿಯವರ ಅಮೆರಿಕ ಭೇಟಿಯನ್ನು ವಿರೋಧಿಸಿ ಅನೇಕ ಅನಿವಾಸಿ ಭಾರತೀಯರು ಅಮೆರಿಕದ ವೈಟ್‌ ಹೌಸ್‌ ಎದುರು ಪ್ರತಿಭಟನೆ ಮಾಡಿದ್ದಾರೆ.

ವೈಟ್‌ ಹೌಸ್‌ ಎದುರಿನ ಲಾಫಯೆಟೆ ಚೌಕ ಉದ್ಯಾನದಲ್ಲಿ ಸೇರಿದ ಪ್ರತಿಭಟನಾಕಾರರು ಮೋದಿಯವರ ಭೇಟಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಫಾಸಿಸಂ ತೊಲಗಿಸಿ ಭಾರತವನ್ನು ರಕ್ಷಿಸಿ’ ಎಂಬ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿ ಗುರುವಾರ ಪ್ರತಿಭಟನೆ ನಡೆಸಿದ್ದು, ಮೋದಿ ಅಧಿಕಾರವಧಿಯಲ್ಲಿ ಮುಸ್ಲಿಂ ಹಾಗೂ ಇತರೆ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಕಿರುಕುಳ ಹೆಚ್ಚಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಶ್ಮೀರದಲ್ಲಿ ಆಡಳಿತವನ್ನು ದಮನ ಮಾಡಲಾಗಿದೆ. ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2014ರಲ್ಲಿ ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ ಭಾರತದಲ್ಲಿ ಧಾರ್ಮಿಕ ಧ್ರುವೀಕರಣ ನಡೆಯುತ್ತಿದೆ. ಮುಖ್ಯವಾಗಿ 20 ಕೋಟಿ ಮುಸ್ಲಿಮರು ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಪ್ರತಿಭಟನೆ ನಡೆಸಲಾಗಿದೆ ಎಂದು ಅಲ್ಜಾಝಿರಾ ಸುದ್ದಿಜಾಲತಾಣ ವರದಿ ಮಾಡಿದೆ.

ಇದನ್ನೂ ಓದಿ: ‘ಗಂಡ ಬೇಡ ಗಂಡನ ಸಹೋದರ ಬೇಕು’ : ಪತ್ನಿ ಹೇಳಿಕೆಯಿಂದ ನೇಣಿಗೆ ಶರಣಾದ ಪತಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights