ಲಕ್ಷದ್ವೀಪದಲ್ಲಿ ಬಿಜೆಪಿ ವಿರುದ್ದ ಆಕ್ರೋಶ; 08 ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ!

ಕೇಂದ್ರಾಡಳಿತ ಪ್ರದೇಶವಾಗಿರುವ ಲಕ್ಷದ್ವೀಪದಲ್ಲಿ ಬಿಜೆಪಿ ದಬ್ಬಾಳಿಕೆ ನಡೆಸಲು ಮುಂದಾಗಿದೆ. ಕೇಂದ್ರ ಸರ್ಕಾರ ಹೊಸದಾಗಿ ನೇಮಿಸಿರುವ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರ ನಡೆಯ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಅಲ್ಲಿನ ಸುಮಾರು 08 ಜನ ಬಿಜೆಪಿ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಕ್ಷವನ್ನು ತೊರೆದಿದ್ದಾರೆ.

ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರು ಲಕ್ಷದ್ವೀಪದಲ್ಲಿ ನಿರಂಕುಶವಾದಿ ದಬ್ಬಾಳಿಕೆ ನಡೆಸುತ್ತಿದ್ದಾರೆ. ಬೀಫ್‌ ಬ್ಯಾನ್‌ ಮಾಡಿದ್ದು, ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದಾರೆ. ಗೂಂಡಾ ಕಾಯ್ದೆಯನ್ನು ಜಾರಿಗೆ ತಂದು ವಿಚಾರಣೆಯೇ ಇಲ್ಲದೆ ಬಂಧಿಸಲು ಅವಕಾಶ ಮಾಡಿಕೊಡುತ್ತಿದ್ದಾರೆ. ಇವೆಲ್ಲವೂ ಜನ ವಿರೋಧಿಯಾಗಿದ್ದು, ಕೇಂದ್ರ ಸರ್ಕಾರ ಲಕ್ಷದ್ವೀಪವನ್ನು ತನ್ನ ನಿಯಂತ್ರಣಕ್ಕೆ ಪಡೆಯಲು ಯತ್ನಿಸುತ್ತಿದೆ ಎಂದು ಬಿಜೆಪಿ ಪದಾಧಿಕಾರಿಗಳು ಆರೋಪಿಸಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪ್ರಫುಲ್ ಖೋಡಾ ಪಟೇಲ್ ಅವರ ನಡೆಯಿಂದ ಸ್ಥಳೀಯ ಸಂಸ್ಕೃತಿ ಹಾಗೂ ಶಾಂತಿ ಹಾಳಾಗಲಿದೆ. ಪಟೇಲ್‌ ಅವರ ಜನವಿರೋಧಿ ಆಡಳಿತದ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಪ್ರತಿಕ್ರಿಯೆಯನ್ನು ನೀಡುತ್ತಿಲ್ಲ. ಹೀಗಾಗಿ ಕೇಂದ್ರ ಗಮನ ಸೆಳೆಯಲು ಮತ್ತು ಪಟೇಲ್‌ ಅವರನ್ನು ವಾಪಸ್‌ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿ ನಾವು ರಾಜೀನಾಮೆ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ರಾಜೀನಾಮೆ ನೀಡುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಸ್ಥಳೀಯ ನಾಯಕರು ಹೇಳಿದ್ದಾರೆ.

ಲಕ್ಷದ್ವೀಪದಲ್ಲಿ ಬಿಜೆಪಿ ನಾಯಕರು ರಾಜೀನಾಮೆ ನೀಡುತ್ತಿರುವುದು ಬಿಜೆಪಿಗೆ ಲಕ್ಷದ್ವೀಪದಲ್ಲಿ ಮಾತ್ರವಲ್ಲದೆ ಕೇರಳದಲ್ಲಿ ಬಿಜೆಪಿ ಸಂಘಟನೆಗೆ ಭಾರೀ ಹಿನ್ನೆಲೆಯಾಗಲಿದೆ ಎಂದು ರಾಜಕೀಯ ವಿಮರ್ಷಕರು ಹೇಳಿದ್ದಾರೆ.

ಲಕ್ಷದ್ವೀಪದ ಬಿಜೆಪಿ ಸಂಘಟನಾ ಉಸ್ತುವಾರಿಯಾಗಿರುವ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎಪಿ ಅಬ್ದುಲ್ಲಾ ಕುಟ್ಟಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ಲಕ್ಷದ್ವೀಪದಲ್ಲಿ ಉಂಟಾಗಿರುವ ಸಮಸ್ಯೆಯನ್ನು ಮುಸ್ಲಿಂ ಸಂಘಟನೆಗಳು ಹಾಗೂ ಕೇರಳದಲ್ಲಿನ ಎಡಪಕ್ಷಗಳು ಸೃಷ್ಟಿಸಿವೆ. ಪಟೇಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಯ ಕನಸುಗಳನ್ನು ಲಕ್ಷದ್ವೀಪದಲ್ಲಿ ಜಾರಿಗೊಳಿಸಲು ಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಕೋಮು-ದ್ವೇಷ ರಾಜಕೀಯಕ್ಕೆ ಬಲಿಯಾಗುತ್ತಿದೆ ಲಕ್ಷದ್ವೀಪ? ಅಲ್ಲಿ ಕೇಂದ್ರ ಸರ್ಕಾರದ ಧೋರಣೆ ಹೇಗಿದೆ ಗೊತ್ತೇ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights