ರಾಜ್ಯದಲ್ಲಿ ಮತ್ತೆ ರಾತ್ರಿ ಕಫ್ರ್ಯೂ ಜಾರಿ…! ಹೊಸ ವರ್ಷಾಚರಣೆಗೆ ಬ್ರೇಕ್‌?

ಮುಂಬರುವ ಹೊಸ ವರ್ಷದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಹರಡುವ ಸಾಧ್ಯತೆ ಇದೆ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ಆಚರಣೆಗೆ ಕಡಿವಾಣ ಹಾಕಬೇಕು. ಅದಕ್ಕಾಗಿ ಬೆಂಗಳೂರು ಸೇರಿದಂತೆ ಕೊರೊನಾ ಸೋಂಕಿತರು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ರಾತ್ರಿ ಕಫ್ರ್ಯೂ ಜಾರಿಗೊಳಿಸಬೇಕು ಎಂದು ತಜ್ಞರ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.

ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿಲ್ಲ. ಹಾಗಾಗಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನರು ಹೆಚ್ಚು ಗುಂಪು ಸೇರುವ ಸಾಧ್ಯತೆ ಇದ್ದು, ಕೊರೊನಾ ಹೆಚ್ಚಾಗಿ ಹರಡಬಹುದು. ಈ ಹಿನ್ನೆಲೆಯಲ್ಲಿ  ಡಿಸೆಂಬರ್ 26 ರಿಂದ ಜನವರಿ 1ರ ವರೆಗೆ ರಾತ್ರಿ 8 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ರಾತ್ರಿ ಕಫ್ರ್ಯೂ ವಿಧಿಸುವಂತೆ  ಡಾ.ಸುದರ್ಶನ್ ನೇತೃತ್ವದ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಿರುವ ವರದಿಯಲ್ಲಿ ಸಲಹೆ ನೀಡಿದೆ.

ಇದನ್ನೂ ಓದಿ: ಅಪೆಕ್ಸ್‌ ಬ್ಯಾಂಕ್‌ ಅಕ್ರಮ: ಸಿಬಿಐ ತನಿಖೆ ತಪ್ಪಿಸಿದ್ದರೇ ಕುಮಾರಸ್ವಾಮಿ?

ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ರಾಜ್ಯಾದ್ಯಂತ ಧಾರ್ಮಿಕ ಉತ್ಸವಗಳು, ಜಾತ್ರೆ, ಹಬ್ಬ-ಹರಿದಿನಗಳು ಬರುತ್ತವೆ. ಇದೇ ಡಿಸೆಂಬರ್ 25ರಂದು ಕ್ರಿಸ್‍ಮಸ್ ಇರುವುದರಿಂದ ಹೆಚ್ಚು ಜನಸಂದಣಿ ಸೇರುವ ಸಾಧ್ಯತೆ ಇರುತ್ತದೆ. ಹಾಗಾಗಿ ಇಂತಹ ಎಲ್ಲ ಧಾರ್ಮಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಬೇಕೆಂದು ಸಮಿತಿ ಶಿಫಾರಸು ಮಾಡಿದೆ.

ಮುಚ್ಚಲ್ಪಟ್ಟಿರುವ ಶಾಲಾ-ಕಾಲೇಜುಗಳನ್ನು ಪಾಳಿ ಸರದಿಯಲ್ಲಿ ಆರಂಭಿಸಬೇಕು. ಯಾವುದೇ ಮುಂಜಾಗ್ರತೆ ಇಲ್ಲದೆ ಆತುರವಾಗಿ ಸರ್ಕಾರ ಕ್ರಮ ಕೈಗೊಳ್ಳಬಾರದು. ಈಗ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಮುಂದುವರಿಸಬೇಕು ಎಂದು ಸಲಹೆ ನೀಡಿದೆ.

ತಜ್ಞರ ಸಮಿತಿಯ ಸಲಹೆಯನ್ನು ಪರಿಗಣಿಸಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.


ಇದನ್ನೂ ಓದಿ: ನಕಲಿ ಖಾತೆಗೆ 55 ಕೋಟಿ ವರ್ಗಾವಣೆ: ಕಪ್ಪುಪಟ್ಟಿಗಿಲ್ಲ ಐಓಬಿ ಬ್ಯಾಂಕ್‌: ಈಶ್ವರಪ್ಪ ಮೌನ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights