ಸಂಸದ ತೇಜಸ್ವಿ ಸೂರ್ಯ ವಿರುದ್ದ ಪಿಐಎಲ್‌; ವಿಚಾರಣೆ ನಡೆಸಲು ಹೈಕೋರ್ಟ್‌ ನಕಾರ!

ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮು ಬಣ್ಣ ಕಟ್ಟಲು ಮುಂದಾಗಿದ್ದ ಸಂಸದ ತೇಜಸ್ವಿ ಸೂರ್ಯ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಲಾಗಿದ್ದು, ಅರ್ಜಿಗಳ ವಿಚಾರಣೆ ನಡೆಸಲು ಹೈಕೋರ್ಟ್‌ ನಿರಾಕರಿಸಿದೆ.

ಬಿಬಿಎಂಪಿ ವಾರ್ ರೂಂನ 17 ನೌಕರರ ಅಮಾನತು ಪ್ರಶ್ನಿಸಿ ಯುವ ಕಾಂಗ್ರೆಸ್‌ನ ವೈ. ಬಿ. ಶ್ರೀವತ್ಸ  ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ರಾಜಕೀಯ ಪ್ರೇರಿತ ಅರ್ಜಿಯಾಗಿದೆ ಎಂದು ಹೇಳಿರುವ ಕೋರ್ಟ್, ವಿಚಾರಣೆ ನಡೆಸುವುದಿಲ್ಲ ಎಂದು ಹೇಳಿದೆ.

ನೌಕರರಿಗೆ ಅನ್ಯಾಯವಾಗಿದ್ದರೆ ಅವರು ಕೋರ್ಟ್‌ಗೆ ಬರಲಿ. ಬೆಡ್ ಬ್ಲಾಕಿಂಗ್ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ಕೋರ್ಟ್‌ಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ಬಿಬಿಎಂಪಿ ವಾರ್ ರೂಂನಲ್ಲಿ ಬೆಡ್‌ ಬ್ಲಾಕಿಂಗ್‌ ದಂದೆ ನಡೆಯುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಕೆಲವು ಶಾಸಕರು ಅರೋಪಿಸಿದ್ದರು. ಅಲ್ಲದೆ, ಈ ದಂದೆಗೆ ಮುಸ್ಲಿಂ ಸಿಬ್ಬಂದಿಗಳು ಕಾರಣ ಎಂದು ಹೇಳಿದ್ದ ಅವರು ಕೋಮು ಬಣ್ಣ ಹಚ್ಚಲು ಮುಂದಾಗಿದ್ದರು.

ಇದಾದ ಬಳಿಕ ವಾರ್‌ ರೂಂನಲ್ಲಿ ಕೆಲಸ ಮಾಡುತ್ತಿದ್ದ 17 ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಒಂದೇ ಸಮುದಾಯದವರನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಕರ್ನಾಟಕ ಸರ್ಕಾರ ಹಗರಣದ ತನಿಖೆಯನ್ನು ಸಿಸಿಬಿಗೆ ವಹಿಸಿತ್ತು.

ಇದನ್ನೂ ಓದಿ: ಬಿಜೆಪಿಯ ನೀಚತನ ಬಹಿರಂಗವಾಗಿದೆ; ಮರೆಮಾಚಲು ಬಿಜೆಪಿಗರು ಹರಸಾಹಸ ಪಡುತ್ತಿದ್ದಾರೆ: ಕಾಂಗ್ರೆಸ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights