ತುಪ್ಪದ ಹುಡುಗಿಗೆ ಕೈಗೆಟಕದ ಬಿಡುಗಡೆ ಭಾಗ್ಯ : ‘ರಾ’ಗಿಣಿಗಿಲ್ಲ ಜಾಮೀನು!

ಡ್ರಗ್ಸ್ ಮಾಫಿಯಾದಲ್ಲಿ ಜೈಲುವಾಸ ಅನುಭವಿಸುತ್ತಿರುವ ನಟಿ ರಾಗಿಣಿಗೆ ಎಷ್ಟೇ ಪ್ರಯತ್ನ ಪಟ್ಟರೂ ಬಿಡುಗಡೆ ಭಾಗ್ಯ ಮಾತ್ರ ಕೈಗೆಟಗುತ್ತಿಲ್ಲ. ಇಂದು ಕೂಡ ಕೋರ್ಟ್ ನಟಿ ರಾಗಿಣಿಯ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಹೀಗಾಗಿ ಕಳೆದ ನಾಲ್ಕು ತಿಂಗಳಿನಿಂದ ಜಾಲುಹಕ್ಕಿಯಾಗಿರುವ ತುಪ್ಪದ ಹುಡುಗಿಗೆ ಇನ್ನೂ ಸೆರೆಮನೆ ವಾಸದಿಂದ ಬಿಡುಗಡೆ ಸಿಗುತ್ತಿಲ್ಲ.

ಹೌದು.. ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದಲ್ಲಿ ನಂಟು ಹೊಂದಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ 4ರಂದು ತುಪ್ಪದ ಬೆಡಗಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಎನ್‌ಡಿಪಿಎಸ್ ಮತ್ತು ಐಪಿಸಿ ಕಾಯಿದೆಗಳಡಿಯಲ್ಲಿ ರಾಗಿಣಿ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ, ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights