ವಿಜಯಪುರ ಪುರಸಭೆಯಲ್ಲಿ ಜೆಡಿಎಸ್‌ಗೆ ಅಧಿಕಾರ; ಜನ ಬೆಂಬಲ ಕಳೆದುಕೊಂಡ ಕಾಂಗ್ರೆಸ್‌!

8 ವರ್ಷಗಳ ನಂತರ ವಿಜಯಪುರ ಪುರಸಭೆಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ 14 ಸ್ಥಾನಗಳನ್ನು ಗೆದ್ದು ಜಯ ಸಾಧಿಸಿದೆ. ಪುರಸಭೆಯಲ್ಲಿ ಗೆದ್ದಿರುವ ಜೆಡಿಎಸ್‌ನ ಕಾರ್ಯಕರ್ತರು ಸಂಭ್ರಮದಲ್ಲಿದ್ದಾರೆ.

ಒಟ್ಟು 21 ಸ್ಥಾನಗಳಿದ್ದ ಪುರಸಭೆಯಲ್ಲಿ ಜೆಡಿಎಸ್‌ 14 ಸ್ಥಾನಗಳಲ್ಲಿ ಗೆದ್ದಿದ್ದು, ಸರಳ ಬಹುಮತವನ್ನು ಪಡೆದುಕೊಂಡಿದೆ. ಉಳಿದಂತೆ ಕಾಂಗ್ರೆಸ್‌ 06- ಬಿಜೆಪಿ 01 ಸ್ಥಾನ ಪಡೆದು ಹಿನ್ನಡೆ ಅನುಭವಿಸಿವೆ. ಸ್ವತಂತ್ರರು 2 ಸ್ಥಾನಗಳಲ್ಲಿ ಗೆದ್ದಿದ್ದಾರೆ.

2013ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ 16 ಸ್ಥಾನಗಳಲ್ಲಿ, ಜೆಡಿಎಸ್ 02, ಪಕ್ಷೇತರ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು. ಅಧಿಕಾರದ ಗದ್ದುಗೆ ಹಿಡಿದಿದ್ದ ಕಾಂಗ್ರೆಸ್‌ನಲ್ಲಿ ಅಧಿಕಾರವಧಿ ಮುಗಿಯುವ ಮುನ್ನವೇ ಮೀಸಲಾತಿಯ ವಿಚಾರವಾಗಿ ಆಂತರಿಕ ಭಿನ್ನಾಭಿಪ್ರಾಯ, ಕಲಹ ಭುಗಿಲೆದ್ದಿತ್ತು. ಪುರಸಭೆಯ ಅಧಿಕಾರದ ಅವಧಿ ಮುಗಿದರೂ ಪದೇ ಪದೇ ನ್ಯಾಯಾಲಯದ ಮಟ್ಟಿಲೇರುತ್ತಿದ್ದ ಸದಸ್ಯರ ಕಾರಣದಿಂದಾಗಿ ಚುನಾವಣೆ ನಡೆದಿರಲಿಲ್ಲ.

ಈ ಎಲ್ಲಾ ಕಾರಣಗಳಿಂದ ಕಾಂಗ್ರೆಸ್‌ ವಿರುದ್ಧ ಜನರು ಅಸಮಾಧಾನಗೊಂಡಿದ್ದರು.

ಜೆಡಿಎಸ್‌ ಗೆಲುವಿನ ಬಗ್ಗೆ ಮಾತನಾಡಿರುವ ಶಾಸಕ ನಿಸರ್ಗ ನಾರಾಯಣಸ್ವಾಮಿ, ಕಾಂಗ್ರೆಸ್ ನವರ ದುರಾಡಳಿತದಿಂದ ಬೇಸತ್ತಿದ್ದ ಜನರು, ಎಚ್.ಡಿ.ಕುಮಾರಸ್ವಾಮಿ ಅವರ ಅವಧಿಯಲ್ಲಿ ಮಾಡಿರುವ ಜನಪರವಾದ ಕಾರ್ಯಕ್ರಮಗಳು ಹಾಗೂ ವಿಜಯಪುರ ಪಟ್ಟಣದ ಅಭಿವೃದ್ಧಿಗಾಗಿ ಮಾಡಿದ್ದ ಕಾರ್ಯಕ್ರಮಗಳನ್ನು ಮೆಚ್ಚಿ ಜನರು ನೀಡಿರುವ ಅವಕಾಶವನ್ನು ಸದುಪಯೋಗ ಮಾಡಿಕೊಂಡು, ಪುರಸಭೆಯ ಆರ್ಥಿಕ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸಲಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಪಾಲಿಕೆ ಚುನಾವಣೆ: ಕಾಂಗ್ರೆಸ್‌ ಭರ್ಜರಿ ಗೆಲುವು; ಈ ಬಾರಿಯೂ ಅಧಿಕಾರದಿಂದ ದೂರ ಉಳಿದ ಬಿಜೆಪಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights