ವೇಶ್ಯಾವಾಟಿಕೆ ಅಪರಾಧವಲ್ಲ; ಲೈಂಗಿಕ ಕಾರ್ಯಕರ್ತೆಯರನ್ನು ಬಿಡುಗಡೆ ಮಾಡಿ: ಬಾಂಬೆ ಹೈಕೋರ್ಟ್‌

ವಯಸ್ಕ ಮಹಿಳೆಯು ತನ್ನ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ. ವೇಶ್ಯಾವಾಟಿಕೆಯು ಕಾನೂನಿನ ಪ್ರಕಾರ ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್‌ ತೀರ್ಪು ನೀಡಿದೆ.

ಕಾನೂನಿನ ಅಡಿಯಲ್ಲಿ ವೇಶ್ಯಾವಾಟಿಕೆಯನ್ನು ಕ್ರಿಮಿನಲ್‌ ಅಪರಾಧ ಎಂದು ಹೇಳಲು ಅವಕಾಶವಿಲ್ಲ. ಆದರೆ, ವೇಶ್ಯಾವೃತ್ತಿಗೆ ದೂಡುವ ಉದ್ದೇಶದಿಂದ ಯಾವುದೇ ವ್ಯಕ್ತಿಗೆ ಮೋಸ ಮಾಡುವುದು ಕಾನೂನುಬಾಹಿರವಾಗಿದೆ ಎಂದು ನ್ಯಾಯಾಲಯವು ಅಭಿಪ್ರಾಯ ಪಟ್ಟಿದೆ.

ಮುಂಬೈ ಹೈಕೋರ್ಟ್‌ನ ನ್ಯಾಯಮೂರ್ತಿ ಪೃಥ್ವಿರಾಜ್ ಚವಾಣ್ ಅವರ ಪೀಠವು, ‘ಅನೈತಿಕ ಸಂಚಾರ (ತಡೆ) ಕಾಯ್ದೆ 1956ರ ಅನ್ವಯ ವೇಶ್ಯಾವಾಟಿಕೆಯನ್ನು ಅಪರಾಧ ಎಂದು ಪರಿಗಣಿಸಲು ಅವಕಾಶವಿಲ್ಲ ಎಂದು ಹೇಳಿದೆ.

ಮಜ್‌ಗಾಂವ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅವರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮೂವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಚವಾಣ್ ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಎಂದು ಹೇಳಿದ್ದು,  ಮುಂಬೈಯ ಸರ್ಕಾರದ ಸಂತ್ರಸ್ಥರ ನಿಲಯದಲ್ಲಿ ಬಂಧಿತರಾಗಿರುವ ಮೂವರು ಮಹಿಳಾ ಲೈಂಗಿಕ ಕಾರ್ಯಕರ್ತೆಯರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದೆ.

‘ವಯಸ್ಕ’ ಮಹಿಳೆಯರು ತಮ್ಮ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಮೂಲಭೂತ ಹಕ್ಕನ್ನು ಹೊಂದಿದ್ದಾರೆ. ಕಾನೂನಿನ ಪ್ರಕಾರ ಮಹಿಳೆಯರನ್ನು ವಿಚಾರಣೆಗೆ ಗುರಿಪಡಿಸುವಲ್ಲಿ ಯಾವುದೇ ಕ್ರಮ ಕೈಗೊಳ್ಳದ ಕಾರಣ, ಸಂತ್ರಸ್ಥರನ್ನು ಅವರ ಮನೆಯಲ್ಲಿ ಬಂಧಿಸುವ ಪ್ರಶ್ನೆಯೇ ಇಲ್ಲ ಎಂದು ಹೈಕೋರ್ಟ್ ಹೇಳಿದೆ.


ಇದನ್ನೂ ಓದಿ: ಉದ್ಯೋಗವಿಲ್ಲದೆ 3 ಲಕ್ಷ ಲೈಂಗಿಕ ಕಾರ್ಯಕರ್ತರು ಆಹಾರಕ್ಕಾಗಿ ಪರಿತಪಿಸುತ್ತಿದ್ದಾರೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights