ಮಲ್ಪೆ ಬೀಚ್‌ನಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಶಿವಮೊಗ್ಗದ ಮೂವರು ವಿದ್ಯಾರ್ಥಿಗಳ ರಕ್ಷಣೆ!

ಉಡುಪಿಯ ಮಲ್ಪೆ ಬೀಚ್‌ನಲ್ಲಿ ಆಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗುತ್ತಿದ್ದ ಶಿವಮೊಗ್ಗ ಮೂಲದ ಮೂವರು ವಿದ್ಯಾರ್ಥಿಗಳನ್ನು ಮಲ್ಪೆ ಬೀಚ್ ಜೀವರಕ್ಷಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.

ಬುಧವಾರ ಮಧ್ಯಾಹ್ನ 2ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಶಿವಮೊಗ್ಗ ಜಿಲ್ಲೆಯ ಕಾಶಿಪುರದ ನಿತಿನ್ ಮತ್ತು ಮಂಜುನಾಥ್, ತರೀಕೆರೆ ನಿವಾಸಿ ಕಿರಣ್ ಎಂಬ ವಿದ್ಯಾರ್ಥಿಗಳನ್ನು ಅಪಾಯದಿಂದ ಪಾರು ಮಾಡಲಾಗಿದೆ.

ಶಿವಮೊಗ್ಗ ಕಾಲೇಜಿನ ಸುಮಾರು 35 ವಿದ್ಯಾರ್ಥಿಗಳು ಮಲ್ಪೆ ಬೀಚ್‌ಗೆ ಪ್ರವಾಸ ಬಂದಿದ್ದರು. ಈ ವೇಳೆ ವಿದ್ಯಾರ್ಥಿಗಳು ಸಮದ್ರದಲ್ಲಿ ಆಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ಅಲೆಗಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದರೆನ್ನಲಾಗಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಮಲ್ಪೆ ಬೀಚ್ ಜೀವ ರಕ್ಷಕ ದಳ ಸಿಬ್ಬಂದಿ ಮಧುಕರ್ ಸಾಲ್ಯಾನ್ ಹಾಗೂ ವಾಟರ್ ಸ್ಪೋರ್ಟ್ಸ್‌ನವರು ನೀರಿನಲ್ಲಿ ಮುಳುಗುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತರಬೇತಿ ಸಂಸ್ಥೆಗಳ ವಿಚಾರದಲ್ಲಿ ಇಲಾಖೆಯ ಧೋರಣೆ ಖಂಡಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಯುಕ್ತರಿಗೆ ಮನವಿ ಪತ್ರ ಸಲ್ಲಿಕೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights