ಶಾಹಿನ್‌ಬಾಗ್‌ನಂತಹ ಸ್ಥಳಗಳನ್ನು ಅನಿರ್ಧಿಷ್ಠಾವಧಿ ಪ್ರತಿಭಟನೆಗೆ ಬಳಸಿಕೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್‌

ಶಾಹಿನ್‌ಬಾಗ್‌ನಂತಹ ಸಾರ್ವಜನಿಕ ಸ್ಥಳಗಳನ್ನು ಅನಿರ್ಧಿಷ್ಟಾವಧಿ ಪ್ರತಿಭಟನೆಗೆ ಬಳಸಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿ ಶಾಹಿನ್‌ಬಾಗ್‌ನಲ್ಲಿ ನಡೆಯುತ್ತಿದ್ದ ಅನಿರ್ಧಿಷ್ಠಾವಧಿ ಧರಣಿಯನ್ನು ಪ್ರಶ್ನಿಸಿ ವಕೀಲ ಅಮಿತ್‌ ಸಾಹ್ನಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ನ ಸಂಜಯ್‌ ಕೌಲ್‌ ಅವರ ಪೀಠ ವಿಚಾರಣೆ ನಡೆಸಿದೆ.

ಶಾಹಿನ್‌ಬಾಗ್‌ ಇರಲಿ ಅಥವಾ ಮತ್ತಾವುದೇ ಸಾರ್ವಜನಿಕ ಸ್ಥಳವಿರಲಿ ಅವುಗಳನ್ನು ಪ್ರತಿಭಟನೆಗಾಗಿ ಬಳಸಿಕೊಳ್ಳಲು ಕಾನೂನು ಅವಕಾಶ ನೀಡುವುದಿಲ್ಲ ಸಂವಿಧಾನವೂ ಪ್ರತಿಭಟನೆಯ ಹಕ್ಕನ್ನು ನೀಡುತ್ತದೆ ಎಂದ ಮಾತ್ರಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ಮಾಡುವಂತಿಲ್ಲ. ಅದಕ್ಕೆ ಕಾನೂನಿಂದ ಅನುಮೋದನೆ ಪಡೆದು ಗೊತ್ತುಪಡಿಸಿದ ಪ್ರದೇಶದಲ್ಲಿ ಮಾಡಬೇಕು ಎಂದು ಸುಪ್ರೀಂಕೋರ್ಟ್​ ಹೇಳಿದೆ.

ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ಗಳನ್ನು ವಿರೋಧಿಸಿ ಜನವರಿಯಿಂದ ಮಾರ್ಚ್‌ ತಿಂಗಳವರೆಗೆ ಶಾಹಿನ್‌ಬಾಗ್‌ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಮಹಿಳೆಯರು ನಡೆಸಿದ್ದರು. ಈ ವೇಳೆ ರಸ್ತೆಗಳು ಬಂದ್​ ಆಗಿದ್ದು, ಸಾರ್ವಜನಿಕರು ರಸ್ತೆ ಸಂಚಾರಕ್ಕೆ ಸಾಕಷ್ಟು ಸಮಸ್ಯೆಯಾಗಿತ್ತು. ಪ್ರತಿಭಟನಾಕಾರರನ್ನು ತೆರವುಗೊಳಿಸುವಲ್ಲಿ ದೆಹಲಿ ಪೊಲೀಸ್​ ಮತ್ತು ಸರ್ಕಾರ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿ ವಕೀಲ ಅಮಿತ್​ ಸಾಹ್ನಿ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌, ಸಾರ್ವಜನಿಕ ಸ್ಥಳಗಳನ್ನು ಅನಿರ್ಧಿಷ್ಟಾವಧಿ ಪ್ರತಿಭಟನೆಗೆ ಬಳಿಸಿಕೊಳ್ಳುವಂತಿಲ್ಲ ಎಂದು ಹೇಳಿದೆ. ಅಷ್ಟೇ ಅಲ್ಲದೆ, ಸರ್ಕಾರಗಳು ಸಾರ್ವಜನಿಕ ಸ್ಥಳಗಳನ್ನು ಸಂಚಾರ ಮುಕ್ತವಾಗಿರಿಸಿಕೊಳ್ಳಬೇಕು. ಪ್ರತಿಭಟನೆ ನಡೆದರೆ, ಅವರನ್ನು ತೆರವುಗೊಳಿಸಲು ಪ್ರತಿಭಟನಾಕಾರರೊಂದಿಗೆ ಮಾತುಕತೆ ಮಾಡಿ ಮನವೊಲಿಸಬೇಕು. ಅದನ್ನು ಬಿಟ್ಟು ನ್ಯಾಯಾಲಯದ ಆದೇಶದವರೆಗೂ ಕಾಯುವುದಲ್ಲ ಎಂದು ದೆಹಲಿ ಸರ್ಕಾರಕ್ಕೆ ಪರೋಕ್ಷವಾಗಿ ತಿಳಿಸಿದೆ.


ಇದನ್ನೂ ಓದಿ: ಶಾಹಿನ್‌ಬಾಗ್‌ ಪ್ರತಿಭಟನಾ ಸ್ಥಳದ ಮೇಲೆ ಪೆಟ್ರೋಲ್‌ ಬಾಂಬ್‌ ದಾಳಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights