PUC exam : ಗುರುವಾರದಿಂದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ – ಸಕಲ ಸಿದ್ಧತೆ…

ಗುರುವಾರ ದಿಂದ ದ್ವಿತೀಯ ಪಿಯುಸಿ ಕೊನೆಯ ಇಂಗ್ಲೀಷ್ ಪರೀಕ್ಷೆ ನಡೆಯಲಿದ್ದು, ಕರೊನಾ ಬಿಕ್ಕಟ್ಟಿನ ನಂತರ ನಡೆಯುತ್ತಿರುವ ಮೊದಲ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೇ ಕರ್ನಾಟಕದಲ್ಲಿ ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಲಾಕ್ ಡೌನ್ ಘೋಷಣೆಯಾಗಿದ್ದರಿಂದ ಆಂಗ್ಲ ಭಾಷೆಯ ಪರೀಕ್ಷೆ ಮಾತ್ರ ಬಾಕಿ ಉಳಿದಿತ್ತು. ಜೂನ್ 18ರ ಗುರುವಾರ ಕರ್ನಾಟಕದ 1016 ಪರೀಕ್ಷಾ ಕೇಂದ್ರಗಳಲ್ಲಿ 5,95,997 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ ಆವರಣ, ಪರೀಕ್ಷೆ ನಡೆಯುವ ಕೊಠಡಿಗಳನ್ನು ಈಗಾಗಲೇ ಸ್ಯಾನಿಟೈಸ್ ಮಾಡಲಾಗಿದೆ.

ಪರೀಕ್ಷೆಗಳನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಎಲ್ಲಾ ವಿದ್ಯಾರ್ಥಿಗಳು, ಸಿಬ್ಬಂದಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಎಲ್ಲಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮಾಡುವ ಗನ್ ಇರಲಿದೆ.

ಪ್ರತಿ ವಿದ್ಯಾರ್ಥಿಯ ದೇಹದ ಉಷ್ಣತೆಯನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ಪರೀಕ್ಷೆ ಮಾಡಲಾಗುತ್ತದೆ. ಜ್ವರ, ಕೆಮ್ಮು ಮತ್ತು ಶೀತದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆಗಳನ್ನು ಮಾಡಲಾಗಿದೆ. ಒಂದು ವೇಳೆ ಯಾವುದೇ ವಿದ್ಯಾರ್ಥಿಗೆ ಕೋವಿಡ್ – 19 ಸೋಂಕು ಇದ್ದರೆ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಅವರ ಪೂರಕ ಪರೀಕ್ಷೆಯ ಸಮಯದಲ್ಲಿ ಪರೀಕ್ಷೆ ಬರೆಯಬಹುದಾಗಿದ್ದು ಅವರನ್ನು ಸಾಮಾನ್ಯ ವಿದ್ಯಾರ್ಥಿ ಎಂದೇ ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights