ರಾಜ್ಯಸಭೆಗೆ ಪುದುಚೇರಿಯಿಂದ ಮೊದಲ ಬಿಜೆಪಿ ಸಂಸದರ ಆಯ್ಕೆ; ಹೆಮ್ಮೆಯ ವಿಷಯ ಎಂದ ಮೋದಿ!

ರಾಜ್ಯಸಭೆಯಲ್ಲಿ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಿಂದ ಬಿಜೆಪಿ ಮೊದಲ ಬಾರಿಗೆ ಸ್ಥಾನ ಪಡೆದುಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಪಕ್ಷದ ಪ್ರತಿಯೊಬ್ಬ ಸದಸ್ಯರಿಗೂ ಇದು ಅಪಾರ ಹೆಮ್ಮೆಯ ವಿಷಯ ಎಂದು ಹೇಳಿದ್ದಾರೆ.

ಇದೇ ವೇಳೆ, ಅಸ್ಸಾಂ ಮತ್ತು ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ಸಚಿವರಾದ ಸರ್ಬಾನಂದ ಸೋನೋವಾಲ್ ಮತ್ತು ಎಲ್ ಮುರುಗನ್ ಅವರನ್ನು ಪ್ರಧಾನಿ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮೋದಿ, “ನಮ್ಮ ಪಕ್ಷವು ಪುದುಚೇರಿಯಿಂದ ಮೊದಲ ರಾಜ್ಯಸಭಾ ಸಂಸದರಾಗಿ ಎಸ್ ಸೆಲ್ವಗಣಪತಿ ಅವರನ್ನು ಆಯ್ಕೆ ಮಾಡಿದೆ. ಇದು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರಿಗೆ ಅಪಾರ ಹೆಮ್ಮೆಯ ವಿಷಯವಾಗಿದೆ. ಪುದುಚೇರಿಯ ಜನರು ನಮ್ಮ ಮೇಲೆ ಇಟ್ಟಿರುವ ನಂಬಿಕೆ ವಿನಮ್ರವಾಗಿದೆ. ನಾವು ಪುದುಚೇರಿಯ ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ” ಎಂದು ಬರೆದಿದ್ದಾರೆ.

“ನನ್ನ ಸಚಿವರ ಸಹೋದ್ಯೋಗಿಗಳಾದ ಸರ್ಬಾನಂದ ಸೋನೋವಾಲ್ ಮತ್ತು ಎಲ್ ಮುರುಗನ್ ಅವರು ಕ್ರಮವಾಗಿ ಅಸ್ಸಾಂ ಮತ್ತು ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಅವರು ಸಂಸತ್ತಿನ ಕಲಾಪವನ್ನು ಉತ್ಕೃಷ್ಟಗೊಳಿಸುತ್ತಾರೆ ಮತ್ತು ಸಾರ್ವಜನಿಕ ಒಳಿತಿಗಾಗಿ ನಮ್ಮ ಕಾರ್ಯಸೂಚಿಯನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸ ನನಗಿದೆ” ಎಂದು ಅವರು ಹೇಳಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ವಿಧಾನಸಭೆಯಲ್ಲಿ AINRC-BJP ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದಲ್ಲಿದೆ.

ಇದನ್ನೂ ಓದಿ: ಗರ್ಭಿಣಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights