Puneeth Rajkumar: ಮಣ್ಣಲಿ ಮರೆಯಾದ ಅಭಿಮಾನಿಗಳ ಅಪ್ಪು

ಹೃದಯಾಘಾತದಿಂದ ನಿಧನಹೊಂದಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಸಮಾಧಿಯ ಪಕ್ಕದಲ್ಲೇ ಈಡಿಗ ಸಂಪ್ರದಾಯದಂತೆ ನಡೆದಿದೆ.

ಅಪಾರ ಸಂಖ್ಯೆಯ ಜನ ಅಂತಿಮ ದರ್ಶನ ಪಡೆದ ನಂತರ ಕಂಠೀರ ಸ್ಟೇಡಿಯಂನಿಂದ ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರದ ಮೆರವಣಿಗೆ ಮೂಲಕ ಕಂಠೀರವ ಸ್ಟುಡಿಯೋ ತಲುಪಿತು. ಕಂಠೀರವ ಸ್ಟುಡಿಯೋದಲ್ಲಿ ರಾಜ್ ಕುಮಾರ್ ಕುಟುಂಬದವರು ಬಂಧುಗಳು ಮತ್ತು ಗಣ್ಯರು ಭಾಗಿಯಾಗಿದ್ದರು. ಪುನೀತ್ ರಾಜ್ ಕುಮಾರ್ ಪಾರ್ಥೀವ ಶರೀರದ ಅಂತಿಮ ವಿಧಿ ವಿಧಾನ ಕಾರ್ಯವನ್ನು ಪುನೀತ್ ಸಹೋದರ ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಿದರು. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ, ಪುತ್ರಿಯರಾದ ವಂದನಾ ಮತ್ತು ಧೃತಿ ತಾಯಿಯನ್ನು ತಬ್ಬಿಕೊಂಡು ಕಣ್ಣೀರುಡುತ್ತಿದ್ದರೆ, ಇತ್ತ ಸಹೋದರ ಶಿವರಾಜ್ ಕುಮಾರ್ ಬಿಕ್ಕಿಬಿಕ್ಕಿ ಅಳುವುದು ಎಲ್ಲರ ಮನಕಲಕುವಂತಿದೆ.

ಪೊಲೀಸ್ ಬ್ಯಾಂಡ್, ರಾಷ್ಟ್ರಗೀತೆ ನುಡಿಸುವುದರೊಂದಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಪುನೀತ್ ಪಾರ್ಥೀವ ಶರೀರರಕ್ಕೆ ಪೊಲೀಸರು ಗೌರವವಂದನೆ ಸಲ್ಲಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ ಹಾಗೂ ವಂದನಾಗೆ ರಾಷ್ಟ್ರಧ್ವಜ ಹಸ್ತಾಂತರಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಗೃಹ ಸಚಿವ ಅರಗ ಜ್ಞಾನೇಂದ್ರ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿವ ಆರ್. ಅಶೋಕ್, ಸಿನಿಮಾ ನಟರಾದ ರವಿಚಂದ್ರನ್, ರಾಕಿಂಗ್ ಸ್ಟಾರ್ ಯಶ್, ಗಣೇಶ್, ಜಗ್ಗೇಶ್, ಕಿಚ್ಚ ಸುದೀಪ್, ದುನಿಯಾ ವಿಜಯ್, ಶ್ರೀಮುರುಳಿ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights