ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ರಕ್ಷಣೆ : ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟ ಡಿಕೆಶಿ!

ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ರಕ್ಷಣೆ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪ ಮಾಡಿದ್ದಾರೆ.

ಹಾಸನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ” ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ರಕ್ಷಣೆ ಮಾಡುವ ಹುನ್ನಾರ ನಡೆಯುತ್ತಿದೆ. ನಾವು ಈ ಪ್ರಕರಣವನ್ನು ಸುಮ್ಮನೆ ಬಿಡುವುದಿಲ್ಲ. ಉಗ್ರ ಹೋರಾಟ ಮಾಡುತ್ತೇವೆ. ಸಿಎಂ ಮತ್ತು ಗೃಹಸಚಿವರು ಎರಡು ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಇದರಿಂದ ತಿಳಿಯುತ್ತದೆ ರಮೇಶ್ ಜಾರಕಿಹೊಳಿಯನ್ನು ರಕ್ಷೆ ಮಾಡುತ್ತಿದ್ದಾರೆಂದು. ನಾವು ಇದನ್ನು ಸುಮ್ಮನೆ ಬಿಡುವುದಿಲ್ಲ. ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ದಾಖಲು, ಸರಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ:ಸಂತ್ರಸ್ತೆ | SahilOnline

ಇನ್ನೂ ಲಸಿಕೆ ಬಗ್ಗೆ ಮಾತನಾಡಿ ಡಿಕೆಶಿ, ” ಸರ್ಕಾರ ಆನ್ ಲೈನ ನಲ್ಲಿ ಲಸಿಕೆ ನೊಂದಣಿಯನ್ನು ನಿಲ್ಲಿಸಿದೆ. ಇದರರ್ಥ 18 ರಿಂದ 45 ವರ್ಷದವರಿಗೆ ಲಸಿಕೆ ನೀಡಲು ಸರ್ಕಾರದ ಬಳಿ ಲಸಿಕೆ ಇಲ್ಲ.  ಹೀಗಾಗಿ ನಾವು ಕೈ ಮುಗಿದು ಕೇಳುತ್ತೇವೆ. ಲಸಿಕೆ ನೀಡಿ. ಜನರ ಜೀವ ಉಳಿಸಿ. ಚಿಕ್ಕಮಕ್ಕಳಿಗೆ ಲಸಿಕೆ ಮಾಡಿ” ಎಂದು ಆಗ್ರಹಿಸಿದ್ದಾರೆ.

ವ್ಯಾಕ್ಸಿನ್​ ಲಭ್ಯವಿಲ್ಲ ಎಂದು ಹೇಳಿಕೊಂಡೇ ಇಂದು ಸಾಂಕೇತಿಕವಾಗಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ | CM BS Yediyurappa inaugurates Vaccine campaign today for above 18 ...

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights