ಕೇಂದ್ರ ಸಚಿವರಿಗೆ ಘೇರಾವ್‌ ಹಾಕಲು ಪ್ರತಿಭಟನಾ ನಿರತ ರೈತರ ಯತ್ನ: ರೈತರನ್ನು ತಡೆದ ಪೊಲೀಸರು!

ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಕೇಂದ್ರ ಸಚಿವ ಸೋಮ್‌ ಪಾರ್ಕಾಶ್‌ ಅವರಿಗೆ ಘೇರಾವ್ ಹಾಕಲು ಯತ್ನಿಸಿದ್ದು, ಪೊಲೀಸರು ರೈತರನ್ನು ತಡೆದಿದ್ದಾರೆ.

ಪಂಜಾಬ್‌ನ ಹೋಶಿಯಾರ್‌ಪುರದ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವರನ್ನು ರೈತರು ತಡೆಯಲು ಯತ್ನಿಸಿದ್ದರು. ಆದರೆ, ಪೊಲೀಸರು ಮೂರು ಹಂತಗಳಲ್ಲಿ ರೈತರನ್ನು ತಡೆದಿದ್ದಾರೆ.

ಕೆಲವು ರೈತರು ರೆಡ್‌ ರಸ್ತೆಯಲ್ಲಿರುವ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದರು, ಆದರೆ ಅಲ್ಲಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿ ಅವರ ಪ್ರಯತ್ನವನ್ನು ವಿಫಲಗೊಳಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ರೈತರು ಕೇಂದ್ರ ಸಚಿವ ಹಾಗೂ ಹೋಶಿಯಾರ್‌ಪುರದ ಸಂಸದರೂ ಆಗಿರುವ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪಾರ್ಕಾಶ್ ಅವರು ಸುಮಾರು ಎರಡು ಗಂಟೆಗಳ ಕಾಲ ಪಕ್ಷದ ಕಚೇರಿಯಲ್ಲಿಯೇ ಇದ್ದರು ಮತ್ತು ನಂತರ ಭಾರೀ ಪೊಲೀಸ್ ರಕ್ಷಣೆಯಲ್ಲಿ ತೆರಳಿದರು.

ಇದನ್ನೂ ಓದಿ: ಕರ್ನಾಟಕದ ಮಾಧ್ಯಮಕ್ಕೆ ಸಿಂಗಂ ಆಗಿದ್ದ ಅಣ್ಣಾಮಲೈ; ಅಸಲಿಗೆ ಸಾಧಿಸಿದ್ದು ಶೂನ್ಯ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights