ಕಚೇರಿ ಆವರಣದಲ್ಲಿ ಯಾವುದೇ ಪೂಜಾ ಸ್ಥಳಿಗಳಿಗೆ ನಿರ್ಬಂಧ; ಪೊಲೀಸರ ನಡೆಗೆ ಬಿಜೆಪಿ ಆಕ್ರೋಶ!

ಪೊಲೀಸ್ ಕಚೇರಿಗಳ ಆವರಣದಲ್ಲಿ ಯಾವುದೇ ಧರ್ಮದ ಪೂಜಾ ಸ್ಥಳಗಳನ್ನೂ ನಿರ್ಮಾಣ ಮಾಡಬಾರದು ಎಂದು ನೀತಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜಸ್ಥಾನ ಪೊಲೀಸರಿಗೆ ಸೂಚಿಸಲಾಗಿದೆ. ಈ ನಿರ್ಬಂಧವನ್ನು ಖಂಡಿಸಿರುವ ಬಿಜೆಪಿ, ರಾಜ್ಯದ ಕಾಂಗ್ರೆಸ್‌ ಸರ್ಕಾರ “ಹಿಂದೂ ವಿರೋಧಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿದೆ.

ರಾಜಸ್ಥಾನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಪೊಲೀಸ್ ವಸತಿ) ಎ ಪೊನ್ನುಚಾಮಿ ಅವರು ಸೋಮವಾರ ಈ ಆದೇಶ ಹೊರಡಿಸಿದ್ದಾರೆ. ರಾಜಸ್ಥಾನ ಧಾರ್ಮಿಕ ಕಟ್ಟಡಗಳು ಮತ್ತು ಸ್ಥಳಗಳ ಕಾಯ್ದೆ 1954 ರ ಅಡಿಯಲ್ಲಿ ಸಾರ್ವಜನಿಕ ಕಟ್ಟಡದಲ್ಲಿ ಯಾವುದೇ ಧಾರ್ಮಿಕ ಸ್ಥಳ ಇರುವಂತಿಲ್ಲ ಎಂದು ಅವರು ಹೇಳಿದ್ದಾರೆ.

ಈ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎಂದು ಖಚಿತಪಡಿಸಿಕೊಳ್ಳುವಂತೆ ರಾಜ್ಯದ ಎಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪೊನ್ನುಚಾಮಿ ಅವರು ಆದೇಶದಲ್ಲಿ, ಕಳೆದ ವರ್ಷಗಳಲ್ಲಿ, ನಂಬಿಕೆಯ ಹೆಸರಿನಲ್ಲಿ ಪೊಲೀಸ್ ಇಲಾಖೆಯ ವಿವಿಧ ರೀತಿಯ ಕಚೇರಿ, ಸಂಕೀರ್ಣಗಳು/ಪೊಲೀಸ್ ಠಾಣೆಗಳಲ್ಲಿ ಪೂಜಾ ಸ್ಥಳಗಳನ್ನು ನಿರ್ಮಿಸುವ ಪ್ರವೃತ್ತಿ “ಹೆಚ್ಚಾಗಿರುವುದು” ಕಂಡುಬಂದಿದೆ. ಇದು ಕಾನೂನಿಗೆ ವಿರುದ್ದವಾಗಿದೆ ಎಂದು ಹೇಳಿದ್ದಾರೆ.

ಅಲ್ಲದೆ, ಪೊಲೀಸ್ ಠಾಣೆಗಳ ಆಡಳಿತ ಕಟ್ಟಡಗಳ ನಿರ್ಮಾಣಕ್ಕೆ ಸಿದ್ಧಪಡಿಸಿ ಅನುಮೋದನೆ ನೀಡಿರುವ ನಕ್ಷೆಯಲ್ಲಿ ಪೂಜಾಸ್ಥಳ ನಿರ್ಮಾಣಕ್ಕೆ ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ; ಒಂದೂವರೆ ವರ್ಷದಲ್ಲಿ ಕಾಂಗ್ರೆಸ್‌ಗೆ ಕೈ ಕೊಟ್ಟ 27 ಶಾಸಕರು

ಈ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರದ “ಹಿಂದೂ ವಿರೋಧಿ” ಮುಖವನ್ನು ಬಹಿರಂಗಪಡಿಸಿದೆ ಎಂದು ಹೇಳಿದೆ.

“ರಾಜ್ಯ ಸರ್ಕಾರವು ಈ ಅನ್ಯಾಯದ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು. ಸಾಂಪ್ರದಾಯಿಕವಾಗಿ, ಸ್ವಾತಂತ್ರ್ಯ ಪೂರ್ವದಲ್ಲಿಯೇ ಪೊಲೀಸ್ ಠಾಣೆಗಳಲ್ಲಿ ಧಾರ್ಮಿಕ ಸ್ಥಳಗಳನ್ನು ಸ್ಥಾಪಿಸಲಾಗಿದೆ ಮತ್ತು ಪೂಜಿಸಲಾಗುತ್ತಿದೆ. ಇದು ಪೊಲೀಸ್ ಠಾಣೆಗಳಲ್ಲಿ ಆಹ್ಲಾದಕರ ಮತ್ತು ಆಧ್ಯಾತ್ಮಿಕ ವಾತಾವರಣವನ್ನು ಕಾಪಾಡುತ್ತದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಹೇಳಿದ್ದಾರೆ.

ಪಕ್ಷದ ಸಂಸದ ಕಿರೋಡಿ ಲಾಲ್ ಮೀನಾ ಅವರು ಕಾಂಗ್ರೆಸ್ ಸರ್ಕಾರವನ್ನು “ಹಿಂದೂ ವಿರೋಧಿ” ಎಂದು ಕರೆದಿದ್ದು, ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಪೊಲೀಸರು ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸುವ ಬದಲು ಇಂತಹ “ತರ್ಕಬದ್ಧವಲ್ಲದ ಆದೇಶ” ಹೊರಡಿಸುವಲ್ಲಿ ತಮ್ಮ ಸಮಯ ಮತ್ತು ಶಕ್ತಿಯನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದು ಮೀನಾ ಆರೋಪಿಸಿದ್ದಾರೆ.

ಇದನ್ನೂ ಓದಿ: ಬಂಟ್ವಾಳ: ಬಜರಂಗದಳ ಕಾರ್ಯಕರ್ತರಿಂದ ಬಿಜೆಪಿ ನಾಯಕನ ಮೇಲೆ ಮಾರಣಾಂತಿಕ ಹಲ್ಲೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights