4 ವರ್ಷ ಜೈಲುವಾಸ ಮುಗಿಸಿ ತಮಿಳುನಾಡಿಗೆ ಹೊರಟ ಶಶಿಕಲಾ; ಗಡಿಯಲ್ಲಿ 1,500 ಪೊಲೀಸರ ನಿಯೋಜನೆ!

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಿಲ್ಲಿ 4 ವರ್ಷಗಳಿಂದ ಜೈಲು ಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡಿ ಮಾಜಿ ಸಿಎಂ ದಿ. ಜಯಲಲಿತಾ ಅವರ ಅಪ್ತೆ ಶಶಿಕಲಾ ಜೈಲಿನಿಂದ ಬಿಡುಗಡೆಯಾಗಿದ್ದು, ಸೋಮವಾರ ತಮಿಳುನಾಡಿಗೆ ಮರಳುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭದ್ರತೆಗಾಗಿ 1,500 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಅಪರಾಧಿಯಾಗಿದ್ದ ಶಶಿಕಲಾ ಅವರನ್ನು ಎಐಎಡಿಎಂಕೆ ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಅವರಿಗೆ ಕರ್ನಾಟಕ ಹೈಕೋರ್ಟ್‌ 04 ವ‍ರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಜನವರಿ 27 ರಂದು ಅವರ ಜೈಲು ಶಿಕ್ಷೆ ಪುರ್ಣಗೊಂಡಿದ್ದು, ಅಂದೇ ಬಿಡುಗಡೆಯಾಗಿದ್ದರು. ಆದರೆ, ಕೊರೊನಾ ಸೋಂಕಿಗೆ ಒಳಗಾಗಿದ್ದ ಕಾರಣ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ರೆಸಾರ್ಟ್‌ವೊಂದರಲ್ಲಿ ವಾಸ್ತವ್ಯ ಹೂಡಿದ್ದರು.

ದೇವನಹಳ್ಳಿಯ ರೆಸಾರ್ಟ್‌ನಿಂದ ಶಶಿಕಲಾ ಅವರು ತಮಿಳುನಾಡು-ಕರ್ನಾಟಕ ಗಡಿಯಲ್ಲಿರುವ ಹೊಸೂರಿಗೆ ಬೆಳಿಗ್ಗೆ 9 ಗಂಟೆಗೆ ತಲುಪಿದ್ದಾರೆ ಎನ್ನಲಾಗಿದೆ. ಅವರಿಗೆ ಬೆಂಗಳೂರಿನಿಂದ ಚೆನ್ನೈವರೆಗಿನ ಅವರ ಬೆಂಬಲಿಗರು 32 ಸ್ಥಳಗಳಲ್ಲಿ ಸ್ವಾಗತ ಕೋರಲಿದ್ದಾರೆ. ಟಿ. ನಗರದಲ್ಲಿರುವ ಎಂಜಿಆರ್ ಅವರ ನಿವಾಸಕ್ಕೆ ಭೇಟಿ ನೀಡಿದ ನಂತರ ಶಶಿಕಲಾ ತಮ್ಮ ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ.

ತಮಿಳುನಾಡಿಗೆ ವಾಪಸಾಗುತ್ತಿರುವ ಶಶಿಕಲಾ ಅವರನ್ನು ಸ್ವಾಗತಿಸಲು ಅವರ ಬೆಂಬಲಿಗರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಗೆ ಆಗಮಿಸಿ, ಬೆಂಗಳೂರಿನಿಂದ ಅವರನ್ನು ರ್‍ಯಾಲಿ ಮುಖಾಂತರ ಕರೆದೊಯ್ಯುವುದಾಗಿ ಬೆಂಗಳೂರು ಪೊಲೀಸರಿಗೆ ಮನವಿ ಮಾಡಿದ್ದರು. ಆದರೆ ಪೊಲೀಸರು ಕೊರೊನಾ ನಿಯಮ ಮತ್ತು ಕಾನೂನು ಸುವ್ಯವಸ್ಥೆ ಕಾರಣ ನೀಡಿ ಅದಕ್ಕೆ ಅನುಮತಿ ನಿರಾಕರಿಸಿದ್ದಾರೆ.

ಇದನ್ನೂ ಓದಿ:  ಉಪಮುಖ್ಯಮಂತ್ರಿಗಳಿಗೆ 05 ಕೋಟಿ ಸಂಗ್ರಹಿಸಲು ತಾಕೀತು; ವಸೂಲಿಗಿಳಿದ ಗ್ರಂಥಾಲಯ ನಿರ್ದೇಶಕರು?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights