ಲೈಂಗಿಕ ಕಿರುಕುಳ ಪ್ರಕರಣ: ಜಾರ್ಖಂಡ್ ಮಾಜಿ ಸಿಎಂ ಸಲಹೆಗಾರ ಸುನೀಲ್ ತಿವಾರಿ ಬಂಧನಕ್ಕೆ ವಾರಂಟ್!

ಬುಡಕಟ್ಟು ಜನಾಂಗದ 18 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಅವರ ರಾಜಕೀಯ ಸಲಹೆಗಾರ ಸುನೀಲ್ ತಿವಾರಿ ಅವರನ್ನು ಬಂಧಿಸಲು ರಾಂಚಿ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ.

ಈಗಾಗಲೇ ತನಿಖಾಧಿಕಾರಿಗಳು ಬಂಧನ ವಾರೆಂಟ್‌ಅನ್ನು ಪಡೆದುಕೊಂಡಿದ್ದು, ಯಾವುದೇ ಸಮಯದಲ್ಲಿ ತಿವಾರಿಯನ್ನು ಬಂಧಿಸುವ ಸಾಧ್ಯತೆಯಿದೆ.

ತಿವಾರಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದ್ದರು ಮತ್ತು ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.

ವೈದ್ಯಕೀಯ ಪರೀಕ್ಷೆಗಳ ನಂತರ ಸೆಕ್ಷನ್ 164 ರ ಅಡಿಯಲ್ಲಿ ನ್ಯಾಯಾಲಯದ ಮುಂದೆ ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, ಪ್ರಕರಣದ ಬಗ್ಗೆ ಕೆಲವು ದಿನಗಳ ಹಿಂದೆ ಯುವತಿ ತನ್ನ ಪೋಷಕರೊಂದಿಗೆ ಹೇಳಿಕೊಂಡಿದ್ದಾಳೆ. ನಂತರ, ಆಕೆಯ ಪೋಷಕರು ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

ಏತನ್ಮಧ್ಯೆ, ಜಾರ್ಖಂಡ್ ಡಿಜಿಪಿ ಮತ್ತು ರಾಂಚಿಯ ಹಿರಿಯ ಪೊಲೀಸ್ ಅಧೀಕ್ಷಕರಿಗೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗವು ನೋಟಿಸ್ ನೀಡಿದೆ.

ಇದನ್ನೂ ಓದಿ: ಅಶ್ಲೀಲ ವಿಡಿಯೋ ಕಾಲ್‌ ಕ್ಲಿಪ್‌ ವೈರಲ್‌; ತಮಿಳು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights