ವಿಸ್ಟ್ರಾನ್ ಕಂಪನಿ ದಾಳಿಗೆ SFI ಕಾರಣ; BJP ಸಂಸದರ ಹೇಳಿಕೆಗೆ ವಿದ್ಯಾರ್ಥಿ ಸಂಘಟನೆ ಆಕ್ರೋಶ!

ನಾಲ್ಕು ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಐಫೋನ್ ಕಂಪನಿಯ ಕಾರ್ಮಿಕರು ಪ್ರತಿಭಟನೆ ನಡೆಸಿ ಕಂಪನಿಗೆ ಸೇರಿದ ಹಲವು ವಸ್ತುಗಳನ್ನು ನಾಶ ಮಾಡಿದ್ದರು. ಈ ದಂಧಲೆಗೆ SFI ಸಂಘಟನೆ ಕಾರಣ ಎಂದು ಜಿಲ್ಲೆಯ ಬಿಜೆಪಿ ಸಂಸದ ಎಸ್. ಮುನಿಸ್ವಾಮಿ ಆರೋಪಿಸಿದ್ದಾರೆ.

ಸಂಸದ ಮುನಿಸ್ವಾಮಿ ಅವರ ಹೇಳಿಕೆಯನ್ನು ಅಲ್ಲಗಳೆದು ಖಂಡಿಸಿರುವ ಎಫ್‌ಎಫ್‌ಐ ವಿದ್ಯಾರ್ಥಿ ಸಂಘಟನೆ, ಬಿಜೆಪಿ ಸಂಸದರು ರಾಜಕೀಯ ಪ್ರೇರಿತ ಆರೋಪ ಮಾಡಿ ನಿಷ್ಪಕ್ಷಪಾತ ತನಿಖೆ ಯನ್ನು ದಿಕ್ಕುತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ.  ಎಸ್ಎಫ್ಐ ಯಾವುದೇ ಪ್ರತಿಭಟನೆಯನ್ನು ಸಂಘಟಿಸಿಲ್ಲರಲಿಲ್ಲ. ಎಸ್ಎಫ್ಐ ಒಂದು ವಿದ್ಯಾರ್ಥಿ ಸಂಘಟನೆಯಾಗಿದ್ದು ಅದು ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಹೋರಾಡುತ್ತಿದೆ. ಆದರೆ ಇಲ್ಲಿರುವುದು ಕಾರ್ಮಿಕರು ಮತ್ತು ಕೈಗಾರಿಕೆ ಪ್ರಶ್ನೆಯಾಗಿದ್ದರು ಅನಾವಶ್ಯಕವಾಗಿ ವಿದ್ಯಾರ್ಥಿ ಸಂಘಟನೆಯ ಹೆಸರನ್ನು ಎಳೆದು ತರುವ ಪ್ರಯತ್ನವನ್ನು ಸಂಸದರು ನಡೆಸಿರುವುದು ಅವರ ಬೇಜವಾಬ್ದಾರಿತನ ತೋರುತ್ತದೆ ಎಂದು ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ. ಕೆ ದೂರಿದ್ದಾರೆ.

ಕಾರ್ಮಿಕರ ಕಾನೂನುಗಳನ್ನು ಉಲ್ಲಂಘಿಸಿ ಯುವಜನರನ್ನು ಕಡಿಮೆ ಸಂಬಳ ನೀಡಿ 12 ಗಂಟೆಗಳ ಕಾಲ ದುಡಿಸಿಕೊಂಡು ನಾಲ್ಕೈದು ತಿಂಗಳಿಂದ ಸಂಬಳ ನೀಡದೆ ಸತಾಯಿಸಿ ಶೋಷಿಸುವುದರ ವಿರುದ್ಧ ಧ್ವನಿ ಎತ್ತಬೇಕಾಗಿದ್ದ ಕೋಲಾರದ ಸಂಸದ ಮುನಿಸ್ವಾಮಿ ಬಂಡವಾಳಶಾಹಿ ಕಂಪನಿಗಳ ಪ್ರಭಾವಕ್ಕೆ ಒಳಗಾಗಿ ಕಾರ್ಮಿಕರ ಹಿತವನ್ನು ಮರೆತಿದ್ದಾರೆ. ಕಾರ್ಮಿಕರ ಶೋಷಣೆಯ ಮೂಲಕ ಕಾರ್ಪೋರೇಟ್ ಹಣಕಾಸು ಬಂಡವಾಳಶಾಹಿಗಳ ಆಸ್ತಿ ಹೆಚ್ಚಳಕ್ಕೆ ಕೈಜೋಡಿಸಿದ್ದಾರೆ.

ಇದನ್ನೂ ಓದಿ: ನಾಲ್ಕು ತಿಂಗಳಿಂದ ವೇತನ ನೀಡದ ಕಂಪನಿ; ಕಾರುಗಳಿಗೆ ಬೆಂಕಿ ಹಚ್ಚಿ, ಕಚೇರಿ ಮೇಲೆ ನೌಕರರ ದಾಳಿ!

ಈ ಘಟನೆ ನಡೆಯಲು ಕಾರಣ ಕಾರ್ಮಿಕರ ಗುತ್ತಿಗೆ ಏಜೆನ್ಸಿ ಮತ್ತು ಕಾರ್ಮಿಕರ ನಡುವಿನ ವೇತನ ಶೋಷಣೆ ಮತ್ತು ಈ ಸಮಸ್ಯೆಯನ್ನು ನಿರ್ವಹಿಸುವಲ್ಲಿನ ಕಾರ್ಮಿಕ ಅಧಿಕಾರಿಗಳ ನಿರ್ಲಕ್ಷ್ಯತೆಯ ಕಾರ್ಮಿಕರ ರೀತಿಯಾಗಿ ದಿಢೀರ್ ಪ್ರತಿಭಟನೆ ನಡೆಸಿ ದಾಂಧಲೆಗೆ ಇಳಿಯಲು ಕಾರಣ ಈ ಸಮಸ್ಯೆಯನ್ನು ಪರಿಹರಿಸುವಲ್ಲಿ ಸರ್ಕಾರ ಮತ್ತು ಜವಾಬ್ದಾರಿ ಸ್ಥಾನದಲ್ಲಿರುವ ಜವಾಬ್ದಾರಿ ಸ್ಥಾನದಲ್ಲಿರುವ ಜನಪ್ರತಿನಿಧಿಯಾಗಿ ಸಂಸದ ಮುನಿಸ್ವಾಮಿ ವಿಫಲರಾಗಿದ್ದಾರೆ ಆದ್ದರಿಂದ ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ವಿದ್ಯಾರ್ಥಿ ಸಂಘಟನೆಗಳ ವಿರುದ್ಧ ರಾಜಕೀಯ ಪ್ರೇರಿತ ಪಕ್ಷಪಾತಿ ಆರೋಪಗಳನ್ನು ಹೊರಿಸುತ್ತಿರುವುದು ಅವರ ಬೇಜವಾಬ್ದಾರಿತನವನ್ನು ತೋರಿಸುತ್ತದೆ. ಈ ಮೂಲಕ ಕಾರ್ಮಿಕರ ನಿಜವಾದ ಸಮಸ್ಯೆಗಳನ್ನು ಮರೆಮಾಚಲು ನಿಷ್ಪಕ್ಷಪಾತ ತನಿಖೆಯ ನಡೆಯುವ ಮುನ್ನವೇ ಸಂಸದ ಮುನಿಸ್ವಾಮಿ ರವರು ತನಿಖೆಯನ್ನು ದಿಕ್ಕು ತಪ್ಪಿಸಲು ಶತಪ್ರಯತ್ನ ಮಾಡುತ್ತಿದ್ದಾರೆ.

ಈ ರೀತಿಯ ದಾಂಧಲೆ ಹಾಗು ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಎಸ್ಎಫ್ಐ ತೀವ್ರವಾಗಿ ವಿರೋಧಿಸುತ್ತದೆ. ಈ ದಾಂಧಲೆ ನಡೆಸಿದವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು. ಕಂಪನಿ ಪುನರ್ ಆರಂಭವಾಗಿ ನಡೆಯಬೇಕು. ಕಾರ್ಮಿಕ ವೇತನ ಸಮಸ್ಯೆ ಬಗೆಹರಿಸಲು ನಿರ್ಲಕ್ಷ್ಯ ತೋರಿರುವ ಕಾರ್ಮಿಕ ಅಧಿಕಾರಿಗಳು, ಕಂಪನಿ ಆಡಳಿತ ಮಂಡಳಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸುತ್ತದೆ.

ಆದರೆ ಎಸ್ಎಫ್ಐ ವಿದ್ಯಾರ್ಥಿ ಸಂಘಟನೆಯ ಹೆಸರನ್ನು ದುರುದ್ದೇಶಪೂರ್ವಕವಾಗಿ ಎಳೆದು ತರುತ್ತಿರುವುದರ ಹಿಂದೆ ಬಿಜೆಪಿ ಆರೆಸ್ಸೆಸ್ ರಾಜಕೀಯ ಸೈದ್ಧಾಂತಿಕ ವಿರೋಧಿ ನಿಲುವೇ ಕಾರಣವಾಗಿದೆ ಆದ್ದರಿಂದ ಸಂಸದ ಮುನಿಸ್ವಾಮಿಯವರು ವಿದ್ಯಾರ್ಥಿ ಸಂಘಟನೆ ವಿರುದ್ಧ ಮಾಡಿರುವ ಆರೋಪವನ್ನು ಈ ಕೂಡಲೇ ಬೇಷರತ್ತಾಗಿ ಹಿಂಪಡೆಯಬೇಕು ಮತ್ತು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಮಿಕರ ಇದ್ದ ಕಾಪಾಡಬೇಕೆಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಶಿವಪ್ಪ.ಎನ್ ಆಗ್ರಹಿಸಿದ್ದಾರೆ.

ಎಸ್ಎಫ್ಐ ಸಂಘಟನೆ ಹೊರ ರಾಜ್ಯದ ಜನರನ್ನು ಕರೆಸಿಕೊಂಡು ದಾಂಧಲೆಯನ್ನು ಸಂಘಟಿಸಿದೆ” ಎಂದು ಕೋಲಾರದ ಸಂಸದ ಎಸ್. ಮುನಿಸ್ವಾಮಿ ಹೇಳಿಕೆ ನೀಡಿದ್ದರು.


ಇದನ್ನೂ ಓದಿ: ಪ್ರತಿಭಟನೆ ಪೆಂಡಾಲ್‌ ಕಿತ್ತೆಸೆದು ಟೊಯೊಟಾ ಕಂಪನಿ ದರ್ಪ; ಛತ್ರಿ ಚಳುವಳಿ ಆರಂಭಿಸಿದ ಕಾರ್ಮಿಕರು

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights