ಬಂದೂಕು ತೋರಿಸಿ ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ದಲಿತ ಮಹಿಳೆಗೆ ಬಂದೂಕು ತೋರಿಸಿ, ಆಕೆಯ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಗೌತಮಬುದ್ದ ನಗರ ಜಿಲ್ಲೆಯ ಜೆವಾರ್‌ನಲ್ಲಿ ಭಾನುವಾರ ನಡೆದಿದೆ.

ಮಹಿಳೆಗೆ ಬಂದೂಕು ತೋರಿಸಿ ಬೆದರಿಸಿದ ದುಷ್ಕರ್ಮಿಗಳು ಆಕೆಯನ್ನು ಗ್ರಾಮದ ಸಮೀಪದ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಪೈಶಾಚಿಕ ಕೃತ್ಯವನ್ನು ಎಸಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸೋಮವಾದಂದು ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಇದರ ನಂತರ ಪ್ರಕರಣದ ಪ್ರಧಾನ ಆರೋಪಿಯನ್ನು ಬಂಧಿಸಲಾಗಿದೆ ಎಂದು ಬುಧವಾರ ತಿಳಿಸಿದ್ದಾರೆ.

ಇದನ್ನೂ ಓದಿ:ಯಾದಗಿರಿ: ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಈ ಘಟನೆಯನ್ನು ವಿರೋಧಿಸಿ ಬಿಎಸ್‌ಪಿ ಮತ್ತು ಕಾಂಗ್ರೆಸ್‌‌ ಪಕ್ಷಗಳು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

“ಆರೋಪಿ ಮಹೇಂದ್ರನನ್ನು ಬುಧವಾರ ಜೇವರ್‌ನಲ್ಲಿರುವ ಆತನ ಹಳ್ಳಿಯ ಸಮೀಪದಿಂದ ಬಂಧಿಸಲಾಗಿದೆ. ಜೇವರ್ ಪೋಲಿಸ್, ವಿಶೇಷ ಕಾರ್ಯಾಚರಣೆ ಗುಂಪು ಮತ್ತು SWAT ನ ಜಂಟಿ ತಂಡವು ಆತನನ್ನು ಸೆರೆಹಿಡಿದಿದೆ” ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

“ಇನ್ನೊಬ್ಬ ವ್ಯಕ್ತಿಯನ್ನು ಈಗಾಗಲೇ ಬಂಧಿಸಿ ಜೈಲಿಗೆ ಕಳುಹಿಸಿದ ಘಟನೆಯ ಹಿನ್ನೆಲೆಯಲ್ಲಿ, ಮಹೇಂದ್ರನ ಬಗ್ಗೆ ಮಾಹಿತಿ ನೀಡಿ ಬಂಧನಕ್ಕೆ ಕಾರಣವಾದವರಿಗೆ ರೂ. 25,000 ಬಹುಮಾನವನ್ನು ಘೋಷಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 55 ವರ್ಷದ ಮಹಿಳೆಯನ್ನ ಕಾಡಿಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ..!

ಘಟನೆಗೆ ಸಂಬಂಧಿಸಿದಂತೆ, ಭಾರತೀಯ ದಂಡ ಸಂಹಿತೆ ಸೆಕ್ಷನ್ 376 ಡಿ (ಗ್ಯಾಂಗ್‌ರೇಪ್), 352 (ಹಲ್ಲೆ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೊತೆಗೆ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ-1989 ರ ಅಡಿಯಲ್ಲಿರುವ ಸೆಕ್ಷನ್‌ಗಳನ್ನು ಸಹ ಪ್ರಕರಣದಲ್ಲಿ ಸೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿ ಮಹೇಂದ್ರನ ವಿರುದ್ದ ಈ ಹಿಂದೆ ಮನೆ ಅತಿಕ್ರಮಣ ಮತ್ತು ಕಳ್ಳತನದ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ದಾಖಲಾಗಿರುವ ಎಫ್‌ಐಆರ್‌ನಲ್ಲಿ ಆತ ಒಬ್ಬನೇ ಆರೋಪಿ ಎಂದು ಉಲ್ಲೇಖಿಸಲಾಗಿದೆ ಎಂದು TNIE ವರದಿ ಮಾಡಿದೆ.

ಇತರ ಮೂವರು ಆರೋಪಿಗಳಲ್ಲಿ ಒಬ್ಬನನ್ನು ಮಹಿಳೆಯು ಪೊಲೀಸರು ತೋರಿಸಿದ ಚಿತ್ರದಿಂದ ಗುರುತಿಸಿದ್ದರು. ಹೀಗಾಗಿ ಸೋಮವಾರ ಒಬ್ಬನನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಬಂಧನ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights