ಹತ್ರಾಸ್ ಅತ್ಯಾಚಾರ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಪೂರ್ಣ : ಇಂದು ವರದಿ ಸಲ್ಲಿಸುವ ಸಾಧ್ಯತೆ!

ಹತ್ರಾಸ್ ಪ್ರಕರಣದ ತನಿಖೆಗಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ತನಿಖೆಯನ್ನು ಪೂರ್ಣಗೊಳಿಸಿದೆ ಮತ್ತು ಶೀಘ್ರದಲ್ಲೇ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. “ಎಸ್ಐಟಿ ಇಂದು ಸಂಜೆ ವೇಳೆಗೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬಹುದು” ಎಂದು ಮೂಲವೊಂದು ತಿಳಿಸಿದೆ.

ಅಕ್ಟೋಬರ್ 7 ರಂದು ಎಸ್‌ಐಟಿ ತನ್ನ ವರದಿಯನ್ನು ಸಲ್ಲಿಸಬೇಕಿತ್ತು, ಆದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ವರದಿ ಸಲ್ಲಿಸುವ ಸಮಯವನ್ನು 10 ದಿನ ವಿಸ್ತರಿಸಿದರು.

ಹತ್ರಾಸ್ ಗ್ರಾಮವೊಂದರಲ್ಲಿ ನಾಲ್ವರು ಪುರುಷರು ಕ್ರೂರವಾಗಿ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ 19 ವರ್ಷದ ಯುವತಿಯೊಬ್ಬಳು ತನ್ನ ಗಾಯಗಳಿಗೆ ಬಲಿಯಾದ ನಂತರ ಸೆಪ್ಟೆಂಬರ್ 30 ರಂದು ಎಸ್‌ಐಟಿ ತನಿಖೆಗೆ ಆದೇಶಿಸಲಾಯಿತು.

ಪ್ರಕರಣದಿಂದಾಗಿ ಶೀಘ್ರದಲ್ಲೇ (ಅಕ್ಟೋಬರ್ 2 ರಂದು) ಎಸ್ಐಟಿಯ ಮೊದಲ ವರದಿಯ ಆಧಾರದ ಮೇಲೆ ಮುಖ್ಯಮಂತ್ರಿಗಳು ಹತ್ರಾಸ್ ಪೊಲೀಸ್ ವರಿಷ್ಠಾಧಿಕಾರಿ, ಡಿಎಸ್ಪಿ ಮತ್ತು ಇತರ ಕೆಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದರು. ಪಾಲಿಗ್ರಾಫ್ ಮತ್ತು ನಾರ್ಕೊ ಅನಾಲಿಸಿಸ್ ಪರೀಕ್ಷೆಗಳನ್ನು ಶಿಫಾರಸು ಮಾಡಲಾಗಿದೆ. ಜೊತೆಗೆ ಕೇಂದ್ರ ತನಿಖಾ ದಳವೂ ಈ ಪ್ರಕರಣದ ತನಿಖೆ ನಡೆಸುತ್ತಿದೆ.

19 ವರ್ಷದ ಹತ್ರಾಸ್ ಯುವತಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 29 ರಂದು ನಿಧನಳಾದಳು. ಘಟನೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights