ಆರೋಗ್ಯ ಖಾತೆಯ ಜೊತೆಗೆ ಡಿಸಿಎಂ ಹುದ್ದೆಯನ್ನೂ ಕೊಡಿ: ಶ್ರೀರಾಮುಲು ಪಟ್ಟು

ಶ್ರೀರಾಮುಲು ಅವರ ಖಾತೆ ಬದಲಾವಣೆ ವಿಚಾರವಾಗಿ ಸಿಎಂ ಯಡಿಯೂರಪ್ಪ ಮಲಿನ ಅಸಮಾಧಾನ ಸಚಿವ ಶ್ರೀರಾಮುಲು ಅವರಿಗೆ ಇನ್ನೂ ಕಡಿಮೆಯಾಗಿಲ್ಲ. ನಿನ್ನೆ ಸಂಧಾನ ನಡೆದಿದ್ದರೂ ಅಸಮಾಧಾನ ಕಾವು ಹೊಗೆಯಾಡುತ್ತಲೇ ಇದೆ. ಈ ನಡುವೆ ಡಿಸಿಎಂ ಹುದ್ದೆಗಾಗಿ ಪಟ್ಟು ಹಿಡಿದ್ದಾರೆ ಎನ್ನಲಾಗಿದೆ.

ತಮ್ಮ ಖಾತೆ ಬದಲಾಗುತ್ತದೆ ಎಂದು ಎಣಿಸದಿದ್ದ ಶ್ರೀರಾಮುಲು , ಸಂಪುಟ ಪುನಾರಚನೆ ವೇಳೆ ಕೂಡ ತಾವು ಸೇಫ್ ಎಂದೇ ಭಾವಿಸಿದ್ದರು. ಆದರೆ, ತಮಗೆ ಒಂದು ಮಾತು ತಿಳಿಸದೇ ಏಕಾಏಕಿ ಖಾತೆ ಬದಲಾವಣೆ ಮಾಡಿರುವುದಕ್ಕೆ ಶ್ರೀರಾಮುಲು ಸಿಎಂ ಮುಂದೆಯೇ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.

ಖಾತೆ ಬದಲಾವಣೆ ನಂತರ ತೀವ್ರ ಅಸಮಾಧಾನಗೊಂಡಿರುವ ಶ್ರೀರಾಮುಲು 2018 ರ ವಿಧಾನಸಭೆ ಚುನಾವಣೆ ವೇಳೆ ತಮ್ಮನ್ನು ಡಿಸಿಎಂ ಅಭ್ಯರ್ಥಿ ಎಂದೇ ಬಿಂಬಿಸಲಾಗಿತ್ತು. ಹೀಗಾಗಿ ತಮಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

Read Also: ಕೇಂದ್ರದ ಕಟ್ಟಪ್ಪಣೆಗೆ ತಲೆಬಾಗಿ ಆರೋಗ್ಯ ಖಾತೆ ಕಿತ್ತುಕೊಂಡ ಬಿಎಸ್‌ವೈ: ರಾಜೀನಾಮೆ ಕೊಡ್ತಾರಾ ಶ್ರೀರಾಮುಲು?

2008 ರಲ್ಲಿ ನಾನು ಆರೋಗ್ಯ ಇಲಾಖೆ ನಿರ್ವಹಿಸಿದ್ದೆ, ನಾನು ಮೊದಲಿನಿಂದಲೂ ಸಮಾಜ ಕಲ್ಯಾಣ ಇಲಾಖೆ ಬಯಸಿದ್ದೆ, ಹಿಂದುಳಿದ ವರ್ಗಗಳ ಸಮುದಾಯಗಳ ಒಳಿತಿಗಾಗಿ ನಾನು ಕೆಲಸ ಮಾಡಲು ಬಯಸಿದ್ದೇನೆ. ಆದರೆ, ನಾನು ಬಯಸಿದ್ದಾಗ, ಬಯಸಿದ್ದ ಖಾತೆ ಕೊಡದೇ ಈಗ ಏಕಾಏಕಿ ಖಾತೆ ಬದಲಾಯಿಸಿದ್ದಾರೆ ಎಂದು ಶ್ರೀರಾಮುಲು ಹೇಳಿದ್ದಾರೆ ಎಂದು ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಡಿಸಿಎಂ ಮಾಡಬೇಕು ಎಂಬುದು ನನ್ನ ಹಳೇಯ ಬೇಡಿಕೆಯಾಗಿದೆ, ಸಮಾಜ ಕಲ್ಯಾಣ ಖಾತೆ ಜೊತೆಗೆ ಡಿಸಿಎಂ ಹುದ್ದೆ ನಿಭಾಯಿಸುವ ಸಾಮರ್ಥ್ಯ ನನಗಿದೆ, ನನಗೆ ತುಂಬಾ ಅನುಭವವಿದೆ, ಜನರ ಬೇಡಿಕೆಯನ್ನು ಈಡೇರಿಸುವುದು ಪಕ್ಷದ ಜವಾಬ್ದಾರಿಯಾಗಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.

ಶ್ರೀರಾಮುಲು ಅವರು ವಾಲ್ಮೀಕಿ ಸಮುದಾಯದ ಪ್ರಮುಖ ನಾಯಕರಾಗಿದ್ದು, ವಾಲ್ಮೀಕಿ ಸಮುದಾಯದ ಸಂಖ್ಯೆ ಅಧಿಕವಾಗಿದೆ, ರಾಜ್ಯದಲ್ಲಿರುವ ವಾಲ್ಮೀಕಿ ಸಮುದಾಯದ 60 ಲಕ್ಷ ಮಂದಿ ತಮ್ಮನ್ನು ಡಿಸಿಎಂ ಮಾಡಬೇಕು ಎಂದು ಬಯಸಿದ್ದಾರೆ ಎಂದು ಈ ಹಿಂದೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಶ್ರೀರಾಮುಲು ತಿಳಿಸಿದ್ದರು.


Read Also: RR ನಗರ: ಮೂರೂ ಪಕ್ಷಗಳ ಅಭ್ಯರ್ಥಿ ಘೋಷಣೆ; ಚುನಾವಣೆಗೆ ಭಾರಿ ವರ್ಕ್‌ಔಟ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights