ಕ್ರೀಡಾಂಗಣಗಳಿಗೂ ಕ್ರೀಡಾ ದಿಗ್ಗಜರ ಹೆಸರುಗಳನ್ನೇ ನಾಮಕರಣ ಮಾಡಿ: ಕಾಂಗ್ರೆಸ್‌

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹೆಸರಿನಲ್ಲಿ ನೀಡಲಾಗುತ್ತಿದ್ದ ಭಾರತದ ಅತ್ಯುನ್ನತ ಕ್ರೀಡಾ ಗೌರವ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಇದಕ್ಕೆ ಸಾಮಾಜಿಕ ವಲಯದಲ್ಲಿ ಖಂಡನೆಗಳೂ ಕೇಳಿಬರುತ್ತಿವೆ. ಪ್ರಶಸ್ತಿ ಮರುನಾಮಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಅಹ್ಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣ ಮತ್ತು ದೆಹಲಿಯಲ್ಲಿರುವ ಅರುಣ್ ಜೇಟ್ಲಿ ಕ್ರೀಡಾಂಗಣದ ಹೆಸರನ್ನು ಕೂಡ ಬದಲಿಸಿ, ಆ ಕ್ರೀಡಾಂಗಣಗಳಿಗೂ ದೇಶದ ಕ್ರೀಡಾ ದಿಗ್ಗಜರ ಹೆಸರನ್ನು ಇಡಬೇಕು ಎಂದು ಹೇಳಿದೆ.

ಶುಕ್ರವಾರ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ ಅವರು, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಹೆಸರಿನಲ್ಲಿ ಘೋಷಣೆ ಮಾಡಿ ಎಂದು ನಾಗರಿಕರಿಂದ ಮನವಿಗಳು ಬರುತ್ತಿವೆ.ಅವರ ಮನೋಭಾವನೆಗಳಿಗೆ ಅನುಗುಣವಾಗಿ ಇನ್ನು ಮುಂದೆ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಲಾಗುವುದು ಎಂದು ಘೋಷಿಸಿದ್ದರು.

ಹೆಸರು ಬದಲಾವಣೆಯನ್ನು ಸ್ವಾಗತಿಸುತ್ತೇವೆ. ಅದನ್ನು ಆಯ್ಕೆಯ ಪ್ರಶಸ್ತಿಗಳಿಗೆ ಸೀಮಿತಗೊಳಿಸುವ ಸರ್ಕಾರದ ಕ್ರಮವನ್ನು ಖಂಡಿಸುತ್ತೇವೆ. ಇನ್ನು ಮುಂದೆ ಕ್ರೀಡಾಂಗಣಗಳನ್ನು ಸಹ ಕ್ರೀಡಾಪಟುಗಳ ಹೆಸರಿನಲ್ಲಿಯೇ ಮರುನಾಮಕರಣ ಮಾಡಲಿ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಧ್ಯಾನ್‌ ಚಂದ್‌ ಹೆಸರಿಗೆ ಮರುನಾಮಕರಣ: ಮೋದಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights