ಇಂದಿನಿಂದ ರಾಜ್ಯದಲ್ಲಿ ಶಾಲೆಗಳು ಆರಂಭ : ಸಿಎಂ ಬಸವರಾಜ ಬೊಮ್ಮಯಿ ಟ್ವೀಟ್!

ರಾಜ್ಯದಲ್ಲಿ ಬರೋಬ್ಬರಿ 18 ತಿಂಗಳ ಬಳಿಕ ಇಂದು ಶಾಲೆಗಳು ಆರಂಭಗೊಳ್ಳುತ್ತಿವೆ. ಆಗಸ್ಟ್​ 23ರಿಂದ 9,10,11 ಮತ್ತು 12ನೇ ತರಗತಿಗಳು ಶುರುವಾಗಲಿದ್ದು, ಶಿಕ್ಷಣ ಇಲಾಖೆ ಸಕಲ ಸಿದ್ದತೆಯನ್ನು ಮಾಡಿಕೊಂಡಿದೆ.

ಇಂದು ಒಟ್ಟು 26 ಜಿಲ್ಲೆಗಳಲ್ಲಿ ಶಾಲೆಗಳು ಆರಂಭವಾಗಲಿದ್ದು ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಮಾತ್ರ ಶಾಲೆಗಳು ಓಪನ್ ಇರಲಿವೆ. ಸಾಕಷ್ಟು ಪರ ಹಾಗೂ ವಿರೋಧದ ನಡುವೆ ಶಾಲೆಗಳು ಆರಂಭವಾಗಿದ್ದು ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೋಷಕರಿಗೆ ಸೂಚನೆ ನೀಡಲಾಗಿದೆ. ಶಾಲೆಯಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಜೊತೆಗೆ ಪೋಷಕರಿಂದ ಶಾಲೆಗೆ ಕಳುಹಿಸುವ ಒಪ್ಪಿಗೆ ಪತ್ರ ಕೊರೊನಾ ನೆಗೆಟಿವ್ ವರದಿ ಇಲ್ಲದೆ ಭೌತಿಕ ತರಗತಿಗೆ ಹಾಜರಾಗಲು ಅವಕಾಶ ಇಲ್ಲ.

ಅದರಂತೆ ರಾಜ್ಯಾದ್ಯಂತ 9 ಹಾಗೂ 10ನೇ ತರಗತಿ ಪ್ರಾರಂಭಕ್ಕೆ 16,850 ಪ್ರೌಢಶಾಲೆಗಳು ಸಜ್ಜಾಗಿವೆ. ಜೊತೆಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪ್ರಾರಂಭಿಸಲು 5,492 ಪಿಯು ಕಾಲೇಜುಗಳು ಸಿದ್ಧತೆ ಮಾಡಿಕೊಂಡಿವೆ. ಜೊತೆಗೆ ಆನ್ ಲೈನ್ ಹಾಗೂ ಆಫ್ಲೈನ್ ಕ್ಲಾಸ್ ಗಳನ್ನೂ ಮುಂದುವರೆಸಿಕೊಂಡು ಹೋಗಲಾಗುತ್ತಿದೆ.

ಶಾಲೆಗಳು ಆರಂಭದ ಹಿನ್ನೆಲೆ ಆಯಾ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳನ್ನು, ಶಿಕ್ಷಕರನ್ನು ಪ್ರೋತ್ಸಾಹಿಸಿ, ಪೋಷಕರಲ್ಲಿ ವಿಶ್ವಾಸ ಮೂಡಿಸುವಂತೆ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸಿ ಎಂದು ಸಲಹೆ ನೀಡುತ್ತೇನೆ ಎಂದು ರಾಜ್ಯದ ಸಿಎಂ ಬಸವರಾಜ ಬೊಮ್ಮಯಿ ಟ್ವೀಟ್ ಮಾಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights