ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕನ ಬಂಧನ; ಪ್ರಾಂಶುಪಾಲರ ಬಂಧನಕ್ಕೆ ಆಗ್ರಹ

ಕೊಯಮತ್ತೂರಿನಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ 17 ವರ್ಷದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ. ಆತನನ್ನು 15 ದಿನಗಳ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಇನ್ನೂ ಇಬ್ಬರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ.

ಸಂತ್ರಸ್ತ ಬಾಲಕಿ ಬರೆದಿದ್ದ ಸೂಸೈಡ್ ನೋಟ್‌ನಲ್ಲಿ, ತನ್ನ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಪ್ರಾಂಶುಪಾಲರಿಗೆ ದೂರು ನೀಡಿದರೂ, ಅವರು ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೆ, ಇತರ ಇಬ್ಬರು ವ್ಯಕ್ತಿಗಳನ್ನು ದೂಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ, ಶಿಕ್ಷಕನು ಬಾಲಕಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ. ಆತನ ಸಂಭಾಷಣೆಯ ಸಾಕ್ಷ್ಯವನ್ನು ಬಾಲಕಿಯ ಮೊಬೈಲ್ ಫೋನ್‌ನಿಂದ ಪೊಲೀಸರು ಸಂಗ್ರಹಿಸಿದ್ದಾರೆ ಎಂದು ವರದಿಯಾಗಿದೆ.

ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಶಾಲಾ ಪ್ರಾಂಶುಪಾಲರನ್ನು ಬಂಧಿಸುವಂತೆ ಪೋಷಕರು ಮತ್ತು ಸಂಬಂಧಿಕರು ಒತ್ತಾಯಿಸಿದ್ದಾರೆ. ಅವರನ್ನು ಬಂಧಿಸುವವರೆಗೂ ಶವವನ್ನು ಸ್ವೀಕರಿಸುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ 746 ರೈತರು ಆತ್ಮಹತ್ಯೆ; ದೇಶದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ

ವಿದ್ಯಾರ್ಥಿನಿಯರು ಮತ್ತು ಮಹಿಳಾ ಸಂಘಟನೆಗಳು, ಎಸ್‌ಡಿಪಿಐ ಮತ್ತು ತಂಥೈ ಪೆರಿಯಾರ್ ದ್ರಾವಿಡರ್ ಕಜಕಂ ಪ್ರತಿನಿಧಿಗಳನ್ನು ಒಳಗೊಂಡ 100 ಕ್ಕೂ ಹೆಚ್ಚು ಜನರು ಬಾಲಕಿಯ ಮನೆ ಮುಂದೆ ಜಮಾಯಿಸಿ ಶಾಲಾ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಆತ್ಮಹತ್ಯೆ ಪತ್ರದಲ್ಲಿ ಶಿಕ್ಷಕ ಮತ್ತು ಪ್ರಾಂಶುಪಾಲರ ಹೆಸರು ಇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಕ್ಷಕನನ್ನು ಉಡುಮಲ್‌ಪೇಟೆಯ ಉಪ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಏಪ್ರಿಲ್‌ನಲ್ಲಿ ನಡೆದ ಲೈಂಗಿಕ ಕಿರುಕುಳದ ಆಘಾತದಿಂದ ಇನ್ನೂ ಹೊರಬರಲು ಸಾಧ್ಯವಾಗದ ಕಾರಣ 17 ವರ್ಷದ ಬಾಲಕಿ ಗುರುವಾರ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಇದನ್ನೂ ಓದಿ: ಒಂದು ವರ್ಷದಲ್ಲಿ 1.36 ಲಕ್ಷ ಜನರು ಆತ್ಮಹತ್ಯೆ; ಮಾನಸಿಕ ಒತ್ತಡವೇ ಮೂಲ ಕಾರಣ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights