T-20 world cup: ಲಯಕ್ಕೆ ಮರಳಿದ ಹಾರ್ದಿಕ್‌ ಪಾಂಡ್ಯ; ನ್ಯೂಜಿಲೆಂಡ್ ವಿರುದ್ದದ ಪಂದ್ಯದಲ್ಲಿ ಬೌಲಿಂಗ್‌!

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ಮತ್ತು ಟೀಂ ಇಂಡಿಯಾ ನಡುವೆ ಹಣಾಹಣಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಆಲ್‌ರೌಂಡರ್‌ ಆಟಗಾರ ಹಾರ್ದಿಕ್‌ ಪಾಂಡ್ಯ ಕಣಕ್ಕಿಳಿಯುವ ಸಾಧ್ಯತೆ ಇದೆ.

ಪಾಕ್‌ ವಿರುದ್ದ ನಡೆದ ಮೊದಲ ಪಂದ್ಯದಲ್ಲಿ ಭುಜದ ನೋವಿನ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರು ವಿಶ್ವಕಪ್‌ ಟೂರ್ನಿಯಲ್ಲಿ ಮತ್ತೆ ಆಟ ಆಡುವುದಲ್ಲಿ ಎಂದು ಹೇಳಲಾಗಿತ್ತು. ಆದರೆ, ಪಾಂಡ್ಯ ಇದೀಗ ಮತ್ತೆ ತಂಡಕ್ಕೆ ಮರಳಿದ್ದಾರೆ. ಬುಧವಾರ ಬೌಲಿಂಗ್ ಅಭ್ಯಾಸವನ್ನು ಆರಂಭಿಸಿರುವ ಅವರು, ನ್ಯೂಜಿಲೆಂಡ್ ವಿರುದ್ಧ ಭಾನುವಾರ ನಡೆಯಲಿರುವ ಪಂದ್ಯದಲ್ಲಿ ಆಡುವುದು ಬಹುತೇಕ ಖಚಿತವಾಗಿದೆ ಎಂದು ತಿಳಿದು ಬಂದಿದೆ.

ಪಾಕ್‌ ವಿರುದ್ದ ನಡೆದ ಪಂದ್ಯದಲ್ಲಿ ಪಾಂಡ್ಯ ಬ್ಯಾಟಿಂಗ್‌ ಮಾಡುವಾಗ ಭುಜದ ನೋವು ಕಾಣಿಸಿಕೊಂಡಿತ್ತು. ಹೀಗಾಗಿ, ಅವರು ಅದೇ ಪಂದ್ಯದ ಫೀಲ್ಡಿಂಗ್‌ಗೂ ಇಳಿದಿರಲಿಲ್ಲ.

ಅಲ್ಲದೆ, ಪಾಂಡ್ಯ ಅವರು ಕೊನೆಯದಾಗಿ ಜುಲೈನಡೆದ ಶ್ರೀಲಂಕಾ ವಿರುದ್ಧದ ಟೂರ್ನಿಯಲ್ಲಿ ಬೌಲಿಂಗ್ ಮಾಡಿದ್ದರು. ಬಳಿಕ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದ ಅವರು ಬೌಲಿಂಗ್‌ನಿಂದ ದೂರ ಉಳಿದಿದ್ದರು.

ಇದೀಗ, ಅವರನ್ನು ಸ್ಕ್ಯಾನಿಂಗ್‌ಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಅವರಿಗೆ ಯಾವುದೇ ಒಳ ಪೆಟ್ಟು ಆಗಿಲ್ಲ ಎಂದು ಹೇಳಲಾಗಿದೆ. ಹೀಗಾಗಿ, ಅವರು ಈಗ ಹಲವು ತಿಂಗಳುಗಳ ಬಳಿಕ ಮತ್ತೆ ಬೌಲಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾ ವಿರುದ್ದ ಗೆದ್ದರೂ ಸಂಭ್ರಮಿಸಲಿಲ್ಲ ಪಾಕ್ ತಂಡ; ಯಾಕೆ ಗೊತ್ತೇ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights