ರೈತರ ಬಗ್ಗೆ ಲಘುವಾಗಿ ಮಾತಾಡಿದ್ರೆ, ದುಷ್ಪರಿಣಾಮವನ್ನು ಸರ್ಕಾರವೇ ಹೊರಬೇಕಾಗುತ್ತದೆ: ಹೆಚ್‌ಡಿಕೆ

ಕೃಷಿ ಮಸೂದೆಗಳನ್ನು ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆಗಳ ವಿಚಾರದಲ್ಲಿ ಸಚಿವರು ಲಘುವಾಗಿ ಮಾತಾನಾಡುತ್ತಿದ್ದಾರೆ. ಇದರ ಪರಿಣಾಮವನ್ನು ಅವರೇ ಹೊರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸಾವಿರಾರು ರೈತರು ಬೆಂಗಳೂರಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ‌. ಆ ಪ್ರತಿಭಟನೆಯಲ್ಲಿ ರೈತರು ಸಾಮಾಜಿಕ ಅಂತರವನ್ನೂ ಕಾಯ್ದುಕೊಂಡಿಲ್ಲ. ಈ ಪರಿಸ್ಥಿತಿಗೆ ರೈತರನ್ನ ತಳ್ಳಿದವರು ಯಾರು ಎಂದು ಪ್ರಶ್ನಿಸಿದ್ದಾರೆ.

ರೈತರ ಜೊತೆ ಚರ್ಚಿಸದೇ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದ್ದಾರೆ. ಕೊರೊನಾ ಪ್ರಕರಣ ಹಾಗೂ ಸಾವುಗಳು ಹೆಚ್ಚುತ್ತಿರುವ ಸಂಕಷ್ಟದ ಸಂದರ್ಭದಲ್ಲಿ ಜಾರಿಗೊಳಿಸುವ ತರಾತುರಿ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

ಮೇ ತಿಂಗಳಿನಲ್ಲಿ ಸುಗ್ರೀವಾಜ್ಞೆ ತಂದಿದ್ದಾರೆ. ಅಲ್ಲಿಂದ ಇಲ್ಲಿಯವರೆಗೆ ಎಷ್ಟೊಂದು ಸಮಯವಿತ್ತು. ಆದರೂ ಯಾವ ವಿರೋಧ ಪಕ್ಷದವರೊಂದಿಗೂ ಚರ್ಚಿಸಿಲ್ಲ ಎಂದು ಆರೋಪಿಸಿದ್ದಾರೆ.


Read Also: ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಎಸ್‌ವೈ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸುರ್ಜೇವಾಲ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights