ದೇಶ ನಡೆಯುವುದು ಸಂವಿಧಾನದ ಮೇಲೆ, ಬಿಜೆಪಿ ಪ್ರಣಾಳಿಕೆಯಿಂದಲ್ಲ; ಜ&ಕಾಕ್ಕೆ ವಿಶೇಷ ಸ್ಥಾನಮಾನ ಮರಳಿ ತರುತ್ತೇವೆ: ಮೆಹಬೂಬಾ ಮುಫ್ತಿ

“ಜಮ್ಮು-ಕಾಶ್ಮೀರದ ಜನರಿಗೆ ಬೇಕಾಗಿರುವುದು ಅವರ ಪ್ರದೇಶ. ಈ ದೇಶ ಸಂವಿಧಾನದ ಮೇಲೆ ನಡೆಯುತ್ತದೆ, ಬಿಜೆಪಿಯ ಪ್ರಣಾಳಿಕೆಯ ಮೆಲೆ ಅಲ್ಲ” ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

14 ತಿಂಗಳ ಗೃಹ ಬಂಧನದಿಂದ ಬಿಡುಗಡೆಯಾದ ನಂತರ ನಡೆಸಿದ ಮೊದಲ ಪತ್ರಿಕಾಗೋಷ್ಠಿಯಲ್ಲಿ, ಬಿಜೆಪಿಯ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು, “ಬಿಜೆಪಿ ಸಂವಿಧಾನವನ್ನು ಅಪವಿತ್ರಗೊಳಿಸಿದೆ. 370 ನೇ ವಿಧಿಯನ್ನು ಪುನಃಸ್ಥಾಪಿಸಿ, ಕಾಶ್ಮೀರ ಸಮಸ್ಯೆಗೆ ಅಂತಿಮ ಪರಿಹಾರವನ್ನು ತರುತ್ತೇನೆ” ಎಂದು ಪ್ರತಿಜ್ಞೆ ಮಾಡಿದರು.

ಮೆಹಬೂಬಾ ಮುಫ್ತಿ ಅವರನ್ನು ಮಂಗಳವಾರ (ಅ.13) ತಡರಾತ್ರಿ ಬಿಡುಗಡೆ ಮಾಡಲಾಗಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಮುಫ್ತಿ ಅವರನ್ನು ಸಾರ್ವಜನಿಕ ಸುರಕ್ಷತೆ ಕಾಯ್ದೆಯಡಿ (ಪಿಎಸ್‌ಎ) ಬಂಧಿಸಲಾಗಿತ್ತು.

ಇದನ್ನೂ ಓದಿ: ಧಾರ್ಮಿಕ ವಿಭಜನೆಯಿಂದ ಜಮ್ಮು ಕಾಶ್ಮೀರದಲ್ಲಿ ಹಿಂದೂ ಪ್ರಾಬಲ್ಯ ಹೆಚ್ಚಿಸಲು ಬಿಜೆಪಿ ಮುಂದಾಗಿದೆ: ಫಾರೂಕ್ ಅಬ್ದುಲ್ಲಾ

ಕಳೆದ 14 ತಿಂಗಳುಗಳಿಂದ ಗೃಹ ಬಂಧನದಲ್ಲಿ ಇದ್ದ ಮುಫ್ತಿ ಅವರ ಬಂಧನದ ಅವಧಿಯನ್ನು ಪದೇ ಪದೇ ವಿಸ್ತರಣೆ ಮಾಡುವುದನ್ನು ಪ್ರಶ್ನಿಸಿ ಅವರ ಮಗಳು ಇಲ್ತಿಜಾ ಸುಪ್ರೀಂಕೋರ್ಟ್‌ನಲ್ಲಿ ಕಾಶ್ಮೀರ ಆಡಳಿತ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಹೇಬಿಯಸ್‌ ಕಾರ್ಪಸ್‌ ರಿಟ್‌ ಅರ್ಜಿ ಸಲ್ಲಿಸಿದ್ದರು.

ಬಿಡುಗಡೆಯ ನಂತರ, “ಒಂದು ವರ್ಷದ ನಂತರ ನಾನು ಇಂದು ಬಿಡುಗಡೆಯಾಗಿದ್ದೇನೆ” ಎಂದು ಮುಫ್ತಿ ಬಿಡುಗಡೆಯಾದ ನಂತರ ಆಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ. “ಬಂಧನದ ಸಮಯದಲ್ಲಿ, ಆಗಸ್ಟ್ 5 ರ ’ಕಪ್ಪು ದಿನ’ ನನ್ನನ್ನು ಗಾಯಗೊಳಿಸುತ್ತಲೇ ಇತ್ತು. ಜಮ್ಮು ಮತ್ತು ಕಾಶ್ಮೀರದ ಜನರು ಸಹ ಈ ರೀತಿಯ ತೊಂದರೆ ಅನುಭವಿಸಿದ್ದಾರೆ. ಆ ದಿನದ ಅವಮಾನವನ್ನು ನಮ್ಮಲ್ಲಿ ಯಾರೂ ಮರೆಯಲು ಸಾಧ್ಯವಿಲ್ಲ” ಎಂದಿದ್ದರು.


ಇದನ್ನೂ ಓದಿ: 14 ತಿಂಗಳ ಬಳಿಕ ಗೃಹಬಂಧನದಿಂದ ಮುಕ್ತಿ ಪಡೆದ ಜೆಕೆ ಮಾಜಿ ಸಿಎಂ ಮೆಹಬೂಬಾ ಮುಫ್ತಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights